ಅಪ್ರಾಪ್ತ ಬಾಲಕಿಯ ಮೇಲೆ ಎರಡು ಬಾರಿ ರೇಪ್ ಎಸಗಿ ಪರಾರಿಯಾದ ಶಾಸಕ

Webdunia
ಶುಕ್ರವಾರ, 6 ಜನವರಿ 2017 (15:16 IST)
ಅಪ್ರಾಪ್ತ ಬಾಲಕಿಯ ಮೇಲೆ ಎರಡು ಬಾರಿ ಅತ್ಯಾಚಾರವೆಸಗಿದ ಆರೋಪ ಎದುರಿಸುತ್ತಿರುವ ಮಾಜಿ ಉಗ್ರಗಾಮಿ ಮತ್ತು ಸ್ಥಳೀಯ ಶಾಸಕ ಜ್ಯೂಲಿಯಸ್ ಡೊರ್ಫಾಂಗ್ ಕಾಣೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ನಿಷೇಧಿತ ಸಂಘಟನೆಯಾದ ಹೈನಿಟ್ರೆಪ್ ನ್ಯಾಷನಲ್ ಲಿಬರೇಶನ್‌ನ ಮಾಜಿ ಮುಖ್ಯಸ್ಥ, ಮೌಹಾಟಿ ವಿಧಾನಸಭೆ ಕ್ಷೇತ್ರದ ಶಾಸಕರಾದ ಜ್ಯೂಲಿಯಸ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ದಾಖಲಾಗಿದೆ.  
 
ಶಾಸಕ ಜ್ಯೂಲಿಯಸ್ ತನ್ನನ್ನು ಹಲವಾರು ಗೆಸ್ಟ್ ಹೌಸ್ ಮತ್ತು ಹೋಟೆಲ್‌ಗಳಿಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ ಎಂದು 14 ವರ್ಷ ವಯಸ್ಸಿನ ಬಾಲಕಿಯೊಬ್ಬಳು ಮಕ್ಕಳ ಹಕ್ಕು ರಕ್ಷಣಾ ಆಯೋಗಕ್ಕೆ ಮಾಹಿತಿ ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.  
 
ಬಾಲಕಿಯ ಹೇಳಿಕೆಯನ್ನು ನ್ಯಾಯಮೂರ್ತಿಗಳ ಸಮ್ಮುಖದಲ್ಲಿ ರಿಕಾರ್ಡ್ ಮಾಡಲಾಗಿದ್ದು, ಶಾಸಕ ಜ್ಯೂಲಿಯಸ್ ಮೋತಿನಗರ್ ಗೆಸ್ಟ್‌ಹೌಸ್‌‌ನಲ್ಲಿ ಒಂದು ಬಾರಿ ಮತ್ತು ರಿ ಭೋಯಿ ನಗರದ ಹೋಟೆಲ್‌ನಲ್ಲಿ ಎರಡನೇ ಬಾರಿ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿಸಿದ್ದಾಳೆ.
 
ಆರೋಪಿ ಶಾಸಕನ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಬಂಧನಕ್ಕಾಗಿ ಜಾಲ ಬೀಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿವೇಕ್ ಸೈಯೆಮ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments