Select Your Language

Notifications

webdunia
webdunia
webdunia
webdunia

ಮೆಟ್ರೋ ರೈಲು ನಿಲ್ದಾಣದಲ್ಲಿ ಹಾಡಹಗಲೇ ಮಹಿಳೆಯ ಹತ್ಯೆ

ಮೆಟ್ರೋ ರೈಲು ನಿಲ್ದಾಣದಲ್ಲಿ ಹಾಡಹಗಲೇ ಮಹಿಳೆಯ ಹತ್ಯೆ
ಗುರ್ಗಾಂವ್ , ಸೋಮವಾರ, 24 ಅಕ್ಟೋಬರ್ 2016 (15:03 IST)
ದೆಹಲಿಯ ಮೆಟ್ರೋ ರೈಲು ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಆರೋಪಿಯೊಬ್ಬ 22 ವರ್ಷದ ಮಹಿಳೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಭೀಕರ ಘಟನೆ ವರದಿಯಾಗಿದೆ.
 
25 ವರ್ಷ ವಯಸ್ಸಿನ ಆರೋಪಿ ಜಿತೇಂದ್ರ ಇಂದು ಬೆಳಿಗ್ಗೆ 9.30ರ ಸುಮಾರಿಗೆ ನಿಲ್ದಾಣದ ಗ್ಯಾಲರಿ ಪ್ರದೇಶದ ಬಳಿ ನಿಂತಿದ್ದ ಮೇಘಾಲಯ ಮೂಲದ ಪಿಂಕಿ ಎನ್ನುವ ಮಹಿಳೆಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  
 
ಮೇಘಾಲಯ ಮೂಲದ ಪಿಂಕಿ ಈಶಾನ್ಯ ರಾಜ್ಯದ ವ್ಯಕ್ತಿಯೊಂದಿಗೆ ವಿವಾಹವಾಗಿದ್ದಳು ಎಂದು ಮೂಲಗಳು ತಿಳಿಸಿವೆ.
 
ಗಂಭೀರವಾಗಿ ಗಾಯಗೊಂಡ ಮಹಿಳೆ ಪಿಂಕಿಯನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ 11.30ರ ಸುಮಾರಿಗೆ ಸಾವನ್ನಪ್ಪಿದ್ದಾಳೆ ಎಂದು ಮೂಲಗಳು ತಿಳಿಸಿವೆ. 
 
ಮಹಿಳೆಯನ್ನು ಚಾಕುವಿನಿಂದ ಇರಿದ ಬಳಿಕ ಆರೋಪಿ ಪರಾರಿಯಾಗಿದ್ದು, ಆರೋಪಿಯ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ. ಯಾವ ಕಾರಣಕ್ಕೆ ಹತ್ಯೆ ಮಾಯಲಾಯಿತು ಎನ್ನುವ ಬಗ್ಗೆ ಮಾಹಿತಿ ಲಭಿಸಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ನೂರು ಶ್ರೀನಿವಾಸ್‌ ಪ್ರಸಾದ್ ಹುಟ್ಟಿ ಬಂದ್ರೂ ನನ್ನನ್ನು ಸೋಲಿಸಲು ಸಾಧ್ಯವಿಲ್ಲ: ಸಿಎಂ ತಿರುಗೇಟು