Webdunia - Bharat's app for daily news and videos

Install App

ಸೈನಿಕ್ ಕಾಲೋನಿ: ಸಿಎಂ ಮೆಹಬೂಬಾ ಮುಫ್ತಿ, ಓಮರ್ ಅಬ್ದುಲ್ಲಾ ನಡುವೆ ವಾಗ್ವಾದ

Webdunia
ಸೋಮವಾರ, 6 ಜೂನ್ 2016 (15:48 IST)
ಜಮ್ಮು ಕಾಶ್ಮಿರ ಕಣಿವೆಯಲ್ಲಿ ಸೈನಿಕ ಕಾಲೋನಿ ಸ್ಥಾಪಿಸಬೇಕು ಎನ್ನುವ ಕುರಿತಂತೆ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಓಮರ್ ಅಬ್ದುಲ್ಲಾ ಅವರ ನಡುವೆ ನಡೆದ ಮಾತಿನ ಚಕಮಕಿ ಅಧಿವೇಶನದಲ್ಲಿ ಪ್ರತಿಧ್ವನಿಸಿತು.
 
ವಿಪಕ್ಷಗಳು ಮತ್ತು ಕೆಲ ಮಾಧ್ಯಮಗಳು ಅನಗತ್ಯವಾಗಿ ಸುಳ್ಳು ವರದಿ ಹರಡಿಸಿ ರಾಜ್ಯದಲ್ಲಿ ಶಾಂತಿಗೆ ಭಂಗ ತರುತ್ತಿವೆ ಎಂದು ಗುಡುಗಿದ ಮೆಹಬೂಬಾ ಮುಫ್ತಿ,  ಮಾಜಿ ಸಿಎಂ ಓಮರ್ ಅಬ್ದುಲ್ಲಾ ಅವರ ಟ್ವಿಟ್‌ಗಳ ಬಗ್ಗೆ ಕೂಡಾ ವಾಗ್ದಾಳಿ ನಡೆಸಿದರು.
 
ಸಾರ್ವಜನಿಕ ಹಿತಾಸಕ್ತಿ ವಿಷಯಗಳ ಬಗ್ಗೆ ಸಾಮಾಜಿಕ ಅಂತರ್ಜಾಲ ತಾಣಗಳಲ್ಲಿ ಪೋಸ್ಟ್ ಮಾಡುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅಬ್ದುಲ್ಲಾ ತಿರುಗೇಟು ನೀಡಿದರು.
 
ಸೇನಾಪಡೆಗಳ ಯೋಧರಿಗಾಗಿ ಸೈನಿಕ ಕಾಲೋನಿ ಸ್ಥಾಪಿಸುವ ಕುರಿತಂತೆ ಧ್ವನಿ ಎತ್ತಿದ ಶಾಸಕ ಶೇಖ್ ಅಬ್ದುಲ್ ರಶೀದ್, ದಿನಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿಯನ್ನು ತೋರಿಸಿದಾಗ ಸದನದಲ್ಲಿ ಕೋಲಾಹಲ ಸೃಷ್ಠಿಯಾಯಿತು. ಸರಕಾರ ಕೂಡಲೇ ಸ್ಪಷ್ಟೀಕರಣ ಕೊಡಬೇಕು ಎಂದು ವಿಪಕ್ಷಗಳು ಒತ್ತಾಯಿಸಿದವು. 
 
 
ರಾಜ್ಯದಲ್ಲಿ ಸೈನಿಕ ಕಾಲೋನಿ ಸ್ಥಾಪಿಸಲಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಮುಫ್ತಿ ಭರವಸೆ ನೀಡಿದ್ದರು.ಆದರೆ, ಇಂದಿನ ದಿನಪತ್ರಿಕೆಯಲ್ಲಿ ಬಂದ ಸುದ್ದಿ ಬೇರೆಯದಾಗಿದೆ. ಇದರಲ್ಲಿ ಯಾವುದೇ ಸತ್ಯ? ಕೂಡಲೇ ಬಹಿರಂಗಪಡಿಸಿ ಎಂದು ವಿಪಕ್ಷಗಳ ಸದಸ್ಯರು ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರನ್ನು ಒತ್ತಾಯಿಸಿದರು.


ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments