Publish Date: Thu, 11 Mar 2021 (07:28 IST)
Updated Date: Thu, 11 Mar 2021 (07:32 IST)
ಕಾನ್ಪುರ : ಕಾನ್ಪುರದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ತಂದೆ ರಸ್ತೆ ಅಪಘಾತದಲ್ಲಿ ಸಾವನಪ್ಪಿದ್ದು, ಇದು ಆರೋಪಿಗಳ ಸಂಚು ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ.
ಸಂತ್ರಸ್ತೆ ಕೃಷಿ ಭೂಮಿಯಿಂದ ಮನೆಗೆ ಮರಳುತ್ತಿದ್ದಾಗ ಆರೋಪಿಗಳು ಮಾನಭಂಗ ಎಸಗಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿಗಳು ಪ್ರಕರಣ ಹಿಂದಕ್ಕೆ ಪಡೆಯುವಂತೆ ಒತ್ತಾಯಿಸುತ್ತಿದ್ದರು. ಆದರೆ ಇದಕ್ಕೆ ಸಂತ್ರಸ್ತೆಯ ಮನೆಯವರು ಒಪ್ಪದ ಕಾರಣ ಸಂತ್ರಸ್ತೆಯ ತಂದೆ ಆಸ್ಪತ್ರೆಯಿಂದ ಬರುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಸಾವನಪ್ಪಿದ್ದಾರೆ. ಈ ಬಗ್ಗೆ ಸಂತ್ರಸ್ತೆಯ ಕುಟುಂಬದವರು ಪ್ರಕರಣ ದಾಖಲಿಸಿದ್ದು , ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.