Publish Date: Mon, 01 Feb 2021 (07:23 IST)
Updated Date: Mon, 01 Feb 2021 (07:25 IST)
ವಿಜಯವಾಡ : ಯುವಕನೊಬ್ಬ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ನಡೆದಿದೆ.
ಯುವಕ ಅಪ್ರಾಪ್ತನನ್ನು ಕರೆದು ಐಸ್ ಕ್ಯಾಂಡಿ ಕೊಡಿಸುವುದಾಗಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಲು ಮುಂದಾಗಿದ್ದಾನೆ. ಸಂತ್ರಸ್ತ ಅಳಲು ಪ್ರಾರಂಭಿಸಿದಾಗ ಆತನ ಮೇಲೆ ಹಲ್ಲೆ ಮಾಡಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಸಂತ್ರಸ್ತ ಮನೆಯವರಿಗೆ ತಿಳಿಸಿದ ಹಿನ್ನಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.