ಮೀರತ್ : ಮಹಿಳೆಯೊಬ್ಬಳ ಮೇಲೆ ಆಕೆಯ ಸೋದರಳಿಯ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆ ಉತ್ತರಪ್ರದೇಶದ ಮೀರತ್ ಜಿಲ್ಲೆಯ ಜಾನಿ ಪ್ರದೇಶದಲ್ಲಿ ನಡೆದಿದೆ.
ಅಡುಗೆ ಮನೆಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಹಿನ್ನಲೆಯಲ್ಲಿ ಮಹಿಳೆ ಆರೋಪಿಯ ಕಪಾಳಕ್ಕೆ ಬಾರಿಸಿದ್ದಾಳೆ. ಇದರಿಂದ ಕೋಪಗೊಂಡ ವ್ಯಕ್ತಿ ಚಾಕುವಿನಿಂದ ಇರಿದು ಕೊಂದಿದ್ದಾನೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಆರೋಪಿ ಸಿಕ್ಕಿಹಾಕಿಕೊಂಡಿದ್ದಾನೆ. ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.