Publish Date: Thu, 11 Feb 2021 (09:43 IST)
Updated Date: Thu, 11 Feb 2021 (09:45 IST)
ರಾಯ್ ಪುರ : ಮಾನವ ಕಳ್ಳಸಾಗಾಣಿಕೆಗೆ ಬಲಿಯಾದ 19 ವರ್ಷದ ಯುವತಿಯೊಬ್ಬಳು ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ ಬಳಿಕ ವ್ಯಕ್ತಿಯೊಬ್ಬ ಮಗುವನ್ನು ಎತ್ತಿಕೊಂಡು ಪರಾರಿಯಾದ ಘಟನೆ ನಡೆದಿದೆ.
ಮಹಿಳೆಯೊಬ್ಬಳು ಈ ದಂಧೆ ನಡೆಸುತ್ತಿದ್ದು ಯುವತಿಯೊಬ್ಬಳನ್ನು ಕೆಲಸ ಕೊಡಿಸುವ ನೆಪದಲ್ಲಿ ಕರೆತಂದು 2 ಲಕ್ಷಕ್ಕೆ ವ್ಯಕ್ತಿಯೊಬ್ಬನಿಗೆ ಮಾರಾಟ ಮಾಡಿದ್ದಾಳೆ. ಅಲ್ಲಿ ಆಕೆ ವ್ಯಕ್ತಿಯಿಂದ ಮಾನಭಂಗಕ್ಕೊಳಗಾದ ಹಿನ್ನಲೆಯಲ್ಲಿ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಾಳೆ.
ಆದರೆ ಆರೋಪಿ ವ್ಯಕ್ತಿ ಮಗುವನ್ನು ಕರೆದುಕೊಂಡು ಪರಾರಿಯಾಗಿ ಅದನ್ನು ಮಾರಾಟ ಮಾಡಿದ್ದಾನೆ. ಆದಕಾರಣ ಯುವತಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ ಎನ್ನಲಾಗಿದೆ.