Publish Date: Sun, 08 Nov 2020 (12:56 IST)
Updated Date: Sun, 08 Nov 2020 (12:58 IST)
ಉತ್ತರ ಪ್ರದೇಶ : 7 ವರ್ಷದ ಬಾಲಕಿಯನ್ನು ಅಪಹರಿಸಿ ಮಾನಭಂಗ ಎಸಗಿ ಕೊಲೆ ಮಾಡಿ ಕೃಷಿ ಭೂಮಿಯಲ್ಲಿ ಎಸೆದ ಘಟನೆ ಉತ್ತರ ಪ್ರದೇಶದ ಸಂತ ಕಬೀರ ನಗರ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ.
ಕೃಷಿ ಭೂಮಿಯಲ್ಲಿ ಬಾಲಕಿಯ ಶವ ಪತ್ತೆಯಾದ ಹಿನ್ನಲೆಯಲ್ಲಿ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ. ಅದರಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢಪಟ್ಟಿದೆ.
ಈ ಬಗ್ಗೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸುವುದಾಗಿ ತಿಳಿಸಿದ್ದಾರೆ.