Select Your Language

Notifications

webdunia
webdunia
webdunia
webdunia

75 ವರ್ಷದ ಮಾನಸಿಕ ಅಸ್ವಸ್ಥೆಯ ಮೇಲೆ ಅತ್ಯಾಚಾರ ಎಸಗಿದ ಕಾಮುಕರು

75 ವರ್ಷದ ಮಾನಸಿಕ ಅಸ್ವಸ್ಥೆಯ ಮೇಲೆ ಅತ್ಯಾಚಾರ ಎಸಗಿದ ಕಾಮುಕರು
ಕೊಚ್ಚಿ , ಬುಧವಾರ, 5 ಆಗಸ್ಟ್ 2020 (07:51 IST)
ಕೊಚ್ಚಿ : ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ 75 ವರ್ಷದ ಮಹಿಳೆಯ ಮೇಲೆ ಕಾಮುಕರು ಅತ್ಯಾಚಾರ ಎಸಗಿದ ಘಟನೆ ಎರ್ನಾಕುಲಂ ಜಿಲ್ಲೆಯ ಕೋಲೆಂಚೇರಿ ಗ್ರಾಮದಲ್ಲಿ ನಡೆದಿದೆ.

ಈ ಘಟನೆಯಲ್ಲಿ  ಸಂತ್ರಸ್ತ ಮಹಿಳೆಯ ಗುಪ್ತಾಂಗಕ್ಕೆ ಗಂಭೀರ ಗಾಯಗಳಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಗೇ ಆಕೆಯ ಮಾನಸಿಕ ಸ್ಥಿತಿ ಕೂಡ ತೀರಾ ಹದಗೆಟ್ಟಿದೆ ಎನ್ನಲಾಗಿದೆ.

ಈ ಬಗ್ಗೆ ಪುಥೆನ್ ಕುರಿಶ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮಹಿಳೆಗೆ ಮರೆಯುವ ಕಾಯಿಲೆ ಇರುವುದರಿಂದ ಘಟನೆಗೆ ಬಗ್ಗೆ ಯಾವುದೇ ಮಾಹಿತಿ ನೀಡುತ್ತಿಲ್ಲ. ಆದಕಾರಣ ಪೊಲೀಸರು ಮಹಿಳೆಯ ಅಕ್ಕಪಕ್ಕದ ಮನೆಯವರು ಹಾಗೂ ವಲಸೆ ಕಾರ್ಮಿಕರು ಸೇರಿದಂತೆ ಕೆಲವರನ್ನು ವಿಚಾರಣೆ ಮಾಡುತ್ತಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಸಂಬಂಧ ಮುಂದುವರಿಸುವಂತೆ ಬೆದರಿಕೆ ಹಾಕಿದವನ ವಿರುದ್ಧ ದಾಖಲಾಯ್ತು ದೂರು