Publish Date: Mon, 21 Sep 2020 (09:18 IST)
Updated Date: Mon, 21 Sep 2020 (09:19 IST)
ದಮೋಹ್ : ಮಧ್ಯಪ್ರದೇಶದ ದಮೋಹ್ ನಲ್ಲಿ 18ತಿಂಗಳ ಮಗುವಿನ ಮೇಲೆ 19 ವರ್ಷದ ಹುಡುಗನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ.
ಮಗುವಿನ ತಾಯಿ ತರಕಾರಿ ತರಲು ಮಾರುಕಟ್ಟೆಗೆ ಹಾಗೂ, ತಂದೆ ಕೆಲಸಕ್ಕೆ ತೆರಳಿದ್ದಾಗ ಮನೆಯಲ್ಲಿ ಯಾರು ಇಲ್ಲದನ್ನು ಅರಿತ ಹುಡುಗ ಮನೆಗೆ ನುಗ್ಗಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ತಾಯಿ ಮನೆಗೆ ಬಂದಾಗ ಮಗುವಿನ ಸ್ಥಿತಿಯನ್ನು ಕಂಡು ಆಸ್ಪತ್ರೆಗೆ ಕರೆದೊಯ್ಯದಾಗ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ತಿಳಿದುಬಂದಿದೆ.
ತಕ್ಷಣ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.