Publish Date: Sun, 01 Nov 2020 (10:57 IST)
Updated Date: Sun, 01 Nov 2020 (10:58 IST)
ಲಕ್ನೋ : ಕಿವಿ ಕೇಳದ ಮತ್ತು ಬಾಯಿ ಬಾರದ 7 ವರ್ಷದ ಬಾಲಕಿಯನ್ನು ಅಪಹರಿಸಿ ಮಾನಭಂಗ ಎಸಗಿ ರಸ್ತೆಯಲ್ಲಿ ಎಸೆದು ಹೋದ ಅಮಾನವೀಯ ಘಟನೆ ಉತ್ತರಪ್ರದೇಶದ ಕನ್ನೌಜ್ ನ ಸೌರಿಖ್ ಪ್ರದೇಶದಲ್ಲಿ ನಡೆದಿದೆ.
ಬಾಲಕಿ ಮನೆಯ ಹೊರಗೆ ಆಟವಾಡುತ್ತಿದ್ದಾಗ ಅವಳನ್ನು ಅಪಹರಿಸಿ ಮಾನಭಂಗ ಎಸಗಿ ಬಳಿಕ ರಸ್ತೆಯ ಮಧ್ಯ ಎಸೆದು ಆರೋಪಿ ಪರಾರಿಯಾಗಿದ್ದಾನೆ. ಬಾಲಕಿ ಹೇಗೋ ಮನೆಗೆ ತಲುಪಿದ್ದು, ಆದರೆ ಅವಳ ದೇಹದಿಂದ ತೀವ್ರವಾದ ರಕ್ತಸ್ರಾವವಾಗುತ್ತಿತ್ತು. ಇದನ್ನು ಗಮನಿಸಿದ ಕುಟುಂಬದವರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾಗ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ತಿಳಿದುಬಂದಿದೆ.
ಈ ಬಗ್ಗೆ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶಂಕಿತರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.