ಗ್ವಾಲಿಯರ್ : ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆ ಪೊಲೀಸರಿಗೆ ದೂರು ನೀಡಲು ಮುಂದಾದ ಹಿನ್ನಲೆಯಲ್ಲಿ ಸಂತ್ರಸ್ತೆ ಹಾಗೂ ಅವಳ 7 ವರ್ಷದ ಮಗಳು ಮತ್ತು ಪತಿಗೆ ಆರೋಪಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಗ್ವಾಲಿಯರ್ ನಲ್ಲಿ ನಡೆದಿದೆ.
32 ವರ್ಷದ ಮಹಿಳೆ ಮನೆಯಲ್ಲಿ ಒಬ್ಬಳೆ ಇದ್ದಾಗ ಆರೋಪಿ ಆಕೆಯ ಮೇಲೆ ಮಾನಭಂಗ ಎಸಗಿದ್ದಾನೆ. ಮತ್ತು ಯಾರಿಗೂ ಈ ವಿಚಾರ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ. ಆದರೆ ಮಹಿಳೆ ಈ ಬಗ್ಗೆ ಪತಿಗೆ ತಿಳಿಸಿದ್ದು, ಪತಿ ಆರೋಪಿ ವಿರುದ್ಧ ದೂರು ನೀಡಿದ್ದಾರೆ. ಈ ಬಗ್ಗೆ ತಿಳಿದ ಆರೋಪಿ ಸಂತ್ರಸ್ತೆಯ ಮನೆಗೆ ಬೆಂಕಿ ಹಚ್ಚಿದ್ದಾನೆ. ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಆರೋಪಿ ವಿರುದ್ಧ ಗ್ವಾಲಿಯರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ ಎನ್ನಲಾಗಿದೆ.