Publish Date: Fri, 20 Nov 2020 (07:00 IST)
Updated Date: Fri, 20 Nov 2020 (07:02 IST)
ಮಧ್ಯಪ್ರದೇಶ : ಹೊಲದಲ್ಲಿ ಕೆಲಸ ಮಾಡಲು ಹೋದ 70 ವರ್ಷದ ಮಹಿಳೆಯ ಮೇಲೆ ಮಾನಭಂಗ ಎಸಗಿ ಕ್ರೂರವಾಗಿ ಕೊಲಲ್ಪಟ್ಟ ಘಟನೆ ಮಧ್ಯಪ್ರದೇಶದ ವಿದಿಶಾ ಜಿಲ್ಲೆಯ ಗಯಾರಸ್ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಆಲಿಜಾ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮಹಿಳೆ ಗ್ರಾಮದ ಹೊರವಲಯದಲ್ಲಿ ಹೊಲವನ್ನು ಗುತ್ತಿಗೆಗೆ ಪಡೆದಿದ್ದು, ಅದರಲ್ಲಿ ಕೆಲಸ ಮಾಡಲು ಹೋಗಿದ್ದಾಳೆ. ಆ ವೇಳೆ ಅಲ್ಲಿಗೆ ಬಂದ ಕಾಮುಕರು ಮಹಿಳೆಯ ಬಾಯಿಗೆ ಮಣ್ಣು ತುಂಬಿಸಿ ಮಾನಭಂಗ ಎಸಗಿ ಖಾಸಗಿ ಭಾಗಕ್ಕೆ ಕೋಲನ್ನು ತುರಿಕಿ ಸಾಯಿಸಿದ್ದಾರೆ. ಗ್ರಾಮದ ಹೊರವಲಯದಲ್ಲಿ ಮಹಿಳೆಯ ಬೆತ್ತಲೆ ಶವವನ್ನು ನೋಡಿದ ಗ್ರಾಮಸ್ಥರು ಮತ್ತು ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಪತ್ತೆಹಚ್ಚುವುದಾಗಿ ತಿಳಿಸಿದ್ದಾರೆ.