Select Your Language

Notifications

webdunia
webdunia
webdunia
webdunia

ಮಾನಸಿಕ ಅಸ್ವಸ್ಥೆಯ ಮೇಲೆ ರೇಪ್: ಇಬ್ಬರು ಆರೋಪಿಗಳ ಬಂಧನ

ಮಾನಸಿಕ ಅಸ್ವಸ್ಥೆಯ ಮೇಲೆ ರೇಪ್: ಇಬ್ಬರು ಆರೋಪಿಗಳ ಬಂಧನ
ನಾಗ್ಪುರ್ , ಗುರುವಾರ, 21 ಮೇ 2015 (17:38 IST)
ಸರಕಾರಿ ಶಾಲೆಯ ವಸತಿಗೃಹದಲ್ಲಿ ಇಬ್ಬರು ವ್ಯಕ್ತಿಗಳು 17 ವರ್ಷ ವಯಸ್ಸಿನ ಮಾನಸಿಕ ಅಸ್ವಸ್ಥೆಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ ಪರಿಣಾಮವಾಗಿ ಆಕೆ ಗರ್ಭಿಣಿಯಾದ ಘಟನೆ ವರದಿಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ಆರೋಪಿಗಳನ್ನು ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕಿಸಾನ್ ಭಾವ್ನೆ ಮತ್ತು ಶಾಲೆಯಲ್ಲಿ ಅಡುಗೆ ಮಾಡುತ್ತಿದ್ದ ಭರತ್ ಕಾಂಬ್ಳಿ ಎನ್ನಲಾಗಿದ್ದು, ಕಳೆದ ಐದು ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಮಾನಸಿಕ ಅಸ್ವಸ್ಥೆಯ ನಗ್ನ ಚಿತ್ರಗಳನ್ನು ತೆಗೆದಿದ್ದಲ್ಲದೇ ಯಾರಿಗಾದರೂ ಹೇಳಿದಲ್ಲಿ ನಗ್ನ ಚಿತ್ರಗಳನ್ನು ಇತರರಿಗೆ ಕೊಡುವುದಾಗಿ ಬೆದರಿಸಿದ್ದಾರೆ ಎನ್ನಲಾಗಿದೆ.
 
ಘಟನೆ ಬೆಳಕಿಗೆ ಬಂದ ನಂತರ ಅತ್ಯಾಚಾರಕ್ಕೊಳಗಾದ ಯುವತಿಯ ತಂದೆ ರಾಣಾ ಪ್ರತಾಪ್ ನಗರ್ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.
 
ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗದ ವಶಕ್ಕೆ ಒಪ್ಪಿಸಿದ್ದು, ಆರೋಪಿಗಳ ವಿರುದ್ಧ ಅತ್ಯಾಚಾರ, ಅಪಹರಣ ಸೇರಿದಂತೆ ಇತರ ಸೆಕ್ಷನ್‌ಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 

Share this Story:

Follow Webdunia kannada