Select Your Language

Notifications

webdunia
webdunia
webdunia
webdunia

ಕಟ್ಟಡ ನಿರ್ಮಾಣಕ್ಕೆ ಸುಪ್ರೀಂ ಬ್ರೇಕ್‌!?

ಕಟ್ಟಡ ನಿರ್ಮಾಣಕ್ಕೆ ಸುಪ್ರೀಂ ಬ್ರೇಕ್‌!?
ನವದೆಹಲಿ , ಸೋಮವಾರ, 6 ಜೂನ್ 2022 (10:20 IST)
ನವದೆಹಲಿ : ರಾಷ್ಟ್ರೀಯ ಉದ್ಯಾನಗಳು ಹಾಗೂ ವನ್ಯಜೀವಿ ರಕ್ಷಿತಾರಣ್ಯಗಳ ಸುತ್ತಲಿನ 1 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ‘ಬಫರ್ ವಲಯ’ ಎಂದು ಪರಿಗಣಿಸಬೇಕು,
 
ಎಂದು ಆದೇಶಿಸಿರುವ ಸರ್ವೋಚ್ಚ ನ್ಯಾಯಾಲಯ, ಈ ವ್ಯಾಪ್ತಿಯಲ್ಲಿ ಯಾವುದೇ ಗಣಿಗಾರಿಕೆ ನಡೆಯಬಾರದು ಹಾಗೂ ಕಾರ್ಖಾನೆಗಳು, ಕಾಯಂ ಕಟ್ಟಡಗಳು ತಲೆಯೆತ್ತಕೂಡದು ಎಂಬ ಮಹತ್ವದ ಸೂಚನೆ ನೀಡಿದೆ.

ಅರಣ್ಯ ರಕ್ಷಣೆ ಕುರಿತಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾ| ಎಲ್. ನಾಗೇಶ್ವರರಾವ್ ನೇತೃತ್ವದ ತ್ರಿಸದಸ್ಯ ಪೀಠ ಈ ಆದೇಶ ಹೊರಡಿಸಿದೆ.

‘ರಾಷ್ಟ್ರೀಯ ಉದ್ಯಾನಗಳು ಹಾಗೂ ವನ್ಯಜೀವಿ ರಕ್ಷಿತಾರಣ್ಯಗಳ ಸುತ್ತಲಿನ 1 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ (ಇಎಸ್ಝಡ್) ಎಂದು ಪರಿಗಣಿಸಬೇಕು. ಇಲ್ಲಿ ಗಣಿಗಾರಿಕೆಗೆ ಅನುಮತಿಸಕೂಡದು.

ಕಾರ್ಖಾನೆ ಹಾಗೂ ಕಾಯಂ ಕಟ್ಟಡಗಳ ನಿರ್ಮಾಣ ನಡೆಯಬಾರದು. ಈ ವ್ಯಾಪ್ತಿಯಲ್ಲಿ ಈಗಾಗಲೇ ಕಟ್ಟಡಗಳು ತಲೆಯೆತ್ತಿದ್ದರೆ ಅಂಥ ಕಟ್ಟಡಗಳ ಪಟ್ಟಿಯನ್ನು ಎಲ್ಲ ರಾಜ್ಯಗಳ ಅರಣ್ಯ ಸಂರಕ್ಷಣಾಧಿಕಾರಿಗಳು ಸಿದ್ಧಪಡಿಸಬೇಕು ಹಾಗೂ ಇನ್ನು 3 ತಿಂಗಳ ಒಳಗೆ ನಮಗೆ ವರದಿ ಸಲ್ಲಿಸಬೇಕು’ ಎಂದು ನಿರ್ದೇಶಿಸಿತು.


Share this Story:

Follow Webdunia kannada

ಮುಂದಿನ ಸುದ್ದಿ

ಕಾರಿನೊಳಗೆ ಉಸಿರುಗಟ್ಟಿ ಮೂವರು ಮಕ್ಕಳು ಸಾವು