Webdunia - Bharat's app for daily news and videos

Install App

ರಾಹುಲ್ ಗಾಂಧಿ ಎಂದರೆ ನಿಫಾ ವೈರಸ್ ಇದ್ದಂತೆ ಎಂದು ವಿವಾದ ಸೃಷ್ಟಿಸಿದ ಸಚಿವ!

Webdunia
ಬುಧವಾರ, 30 ಮೇ 2018 (09:21 IST)
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಮಾರಣಾಂತಿಕ ನಿಫಾ ವೈರಸ್ ಗೆ ಹೋಲಿಸಿ ಹರ್ಯಾಣ ಸಚಿವ ಅನಿಲ್ ವಿಜ್ ವಿವಾದ ಸೃಷ್ಟಿಸಿದ್ದಾರೆ.

ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಲ್ಲಿರುವ ಅನಿಲ್ ‘ರಾಹುಲ್ ಗಾಂಧಿ ಎಂದರೆ ನಿಫಾ ವೈರಸ್ ಇದ್ದಂತೆ. ಅವರ ಜತೆ ಸಂಬಂಧ ಬೆಳೆಸುವ ಯಾವುದೇ ಪಕ್ಷವೂ ಹೆಚ್ಚು ಕಾಲ ಉಳಿಯುವುದಿಲ್ಲ’ ಎಂದು ವಿವಾದಕ್ಕೆ ಕಾರಣರಾಗಿದ್ದಾರೆ.

ಇದಕ್ಕೂ ಮೊದಲು ಹಿಂದೊಮ್ಮೆ ಅನಿಲ್ ವಿಜ್ ನೆಹರೂ ಮತ್ತು ಮಹಾತ್ಮಾ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಭಗತ್ ಸಿಂಗ್ ಮತ್ತು ಲಾಲಾ ಲಜಪತ್ ರಾಯ್ ನೆಹರೂ, ಗಾಂಧಿಯಂತೆ ಅಲ್ಲ, ಈ ಇಬ್ಬರೂ ಮಹಾನ್ ನಾಯಕರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದರು ಎಂದಿದ್ದರು. ಇದೀಗ ಮತ್ತೊಮ್ಮೆ ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments