Webdunia - Bharat's app for daily news and videos

Install App

24 ವರ್ಷದ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ 14ರ ಬಾಲಕ

Webdunia
ಶನಿವಾರ, 28 ಮೇ 2016 (16:14 IST)
14 ವರ್ಷ ವಯಸ್ಸಿನ ಬಾಲಕನೊಬ್ಬನು 24 ವರ್ಷ ವಯಸ್ಸಿನ ಮಹಿಳೆಯ ಮೇಲೆ ಅತ್ಯಾಚಾರವೆಸಗಲು ಪ್ರಯತ್ನದಲ್ಲಿದ್ದಾಗ ಗ್ರಾಮಸ್ಥರು ಆತನನ್ನು ಹಿಡಿದು ಥಳಿಸಿದ ಘಟನೆ ವರದಿಯಾಗಿದೆ.
 
24 ವರ್ಷ ವಯಸ್ಸಿನ ಮಹಿಳೆ ಹೊಲದಲ್ಲಿ ಏಕಾಂಗಿಯಾಗಿ ಕೆಲಸ ನಿರ್ವಹಿಸುತ್ತಿದ್ದಾಗ ಹಿಂದಿನಿಂದ ಬಂದ 13 ವರ್ಷದ ಬಾಲಕ ಆಕೆಯನ್ನು ಗಟ್ಟಿಯಾಗಿ ಹಿಡಿದುಕೊಂಡು ಲೈಂಗಿಕ ದೌರ್ಜನ್ಯ ಎಸಗಲು ಪ್ರಯತ್ನಿಸಿದ್ದಾನೆ. ಆದರೆ, ಮಹಿಳೆ ಜೋರಾಗಿ ಕೂಗಿದ್ದರಿಂದ ನೆರೆಹೊರೆಯಲ್ಲಿದ್ದ ಗ್ರಾಮಸ್ಥರು ಮಹಿಳೆಯನ್ನು ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ.
 
ಬಾಲಕ ಮತ್ತು ಮಹಿಳೆ ಜಾಟ್ ಸಮುದಾಯಕ್ಕೆ ಸೇರಿದವರಾಗಿದ್ದರಿಂದ ಗ್ರಾಮದ ಜಾಟ್ ಸಮುದಾಯದ ಹಿರಿಯರು ಪೊಲೀಸರಿಗೆ ದೂರು ನೀಡುವುದರ ಬದಲು ತಾವೇ ಶಿಕ್ಷೆ ಘೋಷಿಸಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿದ್ದಾರೆ.  
 
ಗ್ರಾಮಸ್ಥರ ಮುಂದೆ ಶಿಕ್ಷೆ ಘೋಷಿಸಿದ ಹಿರಿಯರು, ಅತ್ಯಾಚಾರಕ್ಕೆ ಯತ್ನಿಸಿದ ಬಾಲಕನಿಗೆ ಆತನ ತಂದೆಯೇ ಬೂಟಿನಿಂದ ಐದು ಬಾರಿ ಬಾರಿಸಬೇಕು ಎಂದು ಘೋಷಿಸಿದ್ದಾರೆ. ಅದರಂತೆ, ಬಾಲಕನ ತಂದೆ ಐದು ಬಾರಿ ಬೂಟಿನಿಂದ ಬಾಲಕನಿಗೆ ಬಾರಿಸಿದ್ದಾನೆ.
 
ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆದಿರುವ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ ಎಂದು ಬರ್ಹಾನ್ ಪೊಲೀಸ್ ಠಾಣೆಯ ಅಧಿಕಾರಿ ಎ.ಕೆ.ತ್ರಿಪಾಠಿ ತಿಳಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ