ಮಹಾರಾಷ್ಟ್ರದ ಅಹ್ಮದ್‌ನಗರ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್‌ರೇಪ್ ಎಸಗಿದ ಆರೋಪಿಗಳು, ಆಕೆಯ ಕೈ ಕಾಲು ಮುರಿದು ನಂತರ ಹತ್ಯೆ ಮಾಡಿದ ಹೇಯ ಘಟನೆ ವರದಿಯಾಗಿದೆ.
ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ನಾಲ್ಕನೇ ಆರೋಪಿಯ ಪತ್ತೆಗೆ ಜಾಲ ಬೀಸಲಾಗಿದೆ. ಆರೋಪಿಗಳ ವಿರುದ್ಧ ಪೋಸ್ಕೋ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಅಜ್ಜ, ಅಜ್ಜಿಯರ ಮನೆಗೆ ಆಗಮಿಸಿದ್ದ ಬಾಲಕಿ, ನಂತರ ಮನೆಗೆ ವಾಪಸ್ ಆಗಿರಲಿಲ್ಲ. ಗ್ರಾಮಸ್ಥರು ಹುಡುಕಾಟ ನಡೆಸಿದಾಗ ಫಾರ್ಮ್ ಬಳಿ ಆಕೆಯ ಸೈಕಲ್ ಪತ್ತೆಯಾಗಿದೆ. ಮತ್ತಷ್ಟು ಹುಡುಕಿದಾಗ ಆಕೆಯ ಮೃತದೇಹ ಪತ್ತೆಯಾಗಿತ್ತು.
ಬಾಲಕಿಯ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು, ಆರೋಪಿಗಳು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ನಂತರ ಹತ್ಯೆ ಮಾಡಿದ್ದಾರೆ ಎಂದು ವರದಿ ನೀಡಿದ್ದಾರೆ.
ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭರವಸೆ ನೀಡಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.