Publish Date: Thu, 02 May 2019 (13:55 IST)
Updated Date: Thu, 02 May 2019 (13:58 IST)
ಭೋಪಾಲ್ : 12 ವರ್ಷದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿ ಬಳಿಕ ಕಲ್ಲಿನಿಂದ ಆಕೆಯ ತಲೆಯನ್ನು ಜಜ್ಜಿ ಕೊಲೆ ಮಾಡಿದ ಅಮಾನವೀಯ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ.
ಬಾಲಕಿಯನ್ನು 16 ವರ್ಷದ ಆಕೆಯ ಸಂಬಂಧಿಯೊಬ್ಬಳು ಹತ್ತಿರದ ಮನುಬವನ್ ತೆಕ್ರಿ ಪ್ರದೇಶದ ದೇವಾಲಯಕ್ಕೆ ಕರೆದುಕೊಂಡು ಹೋಗಿದ್ದ ವೇಳೆ ದೇವಾಲಯಕ್ಕೆ ಬಂದಿದ್ದ ಇಬ್ಬರು ಆರೋಪಿಗಳು ಬಾಲಕಿಯನ್ನು ದೂರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಅಲ್ಲದೆ ಕಲ್ಲಿನಿಂದ ತಲೆಯನ್ನು ಜಜ್ಜಿ ಕೊಲೆ ಮಾಡಿದ್ದಾರೆ.
ಇತ್ತ ಬಾಲಕಿಯ ಪೋಷಕರು ಮಗಳು ನಾಪತ್ತೆಯಾದ ಹಿನ್ನಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರನ್ನು ಆಧರಿಸಿ ತನಿಖೆ ನಡೆಸಿದ್ದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಇವರು ಮೃತ ಬಾಲಕಿಯ ಮನೆಯ ಹತ್ತಿರವೇ ವಾಸವಾಗಿದ್ದವರು ಎಂಬುದಾಗಿ ತಿಳಿದುಬಂದಿದೆ. ಅಲ್ಲದೇ ಆರೋಪಿಗಳಿಗೆ ಸಹಾಯ ಮಾಡಿದ ಆರೋಪದ ಮೇಲೆ ಮೃತ ಬಾಲಕಿಯ ಸಂಬಂಧಿಕಳೋರ್ವಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಸತ್ಯಾಂಶ ಬಾಯ್ಬಿಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.