Select Your Language

Notifications

webdunia
webdunia
webdunia
webdunia

ನಿರಾಶ್ರಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಕಾಮುಕ

ನಿರಾಶ್ರಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಕಾಮುಕ
ನವದೆಹಲಿ , ಸೋಮವಾರ, 10 ಜುಲೈ 2017 (15:46 IST)
ನಗರದ ಕನ್ನಾಟ್ ಪ್ರದೇಶದಲ್ಲಿ ತನ್ನ ಪೋಷಕರೊಂದಿಗೆ ಮಲಗಿದ್ದ 8 ವರ್ಷ ವಯಸ್ಸಿನ ಬಾಲಕಿಯೊಬ್ಬಳ ಮೇಲೆ ಕಸಗುಡಿಸುವ ಕಾರ್ಮಿಕನೊಬ್ಬ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಜುಲೈ 8 ರಂದು ಮಧ್ಯರಾತ್ರಿ ಸಮಯದಲ್ಲಿ ಆರೋಪಿ ಬಾಲಕಿಯನ್ನು ಬೆದರಿಸಿ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆರೋಪಿ ಅದೇ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದರಿಂದ ಬಾಲಕಿಗೆ ಪರಿಚಿತನಾಗಿದ್ದನು. ರಾತ್ರಿ ಸಮಯದಲ್ಲಿ ಪೋಷಕರೊಂದಿಗೆ ಮಲಗಿದ್ದ ಬಾಲಕಿಯನ್ನು ಎಬ್ಬಿಸಿ, ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ನಂತರ ಆಕೆಯನ್ನು ರಸ್ತೆ ಬದಿ ಎಸೆದು ಪರಾರಿಯಾಗಿದ್ದಾನೆ.
 
ಬಾಲಕಿ ತನ್ನ ಪೋಷಕರ ಬಳಿ ತೆರಳಿ ನಡೆದ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾಳೆ. ಪೋಷಕರು ಆರೋಪಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಯ ಪತ್ತೆಗೆ ಜಾಲ ಬೀಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಬಸವರಾಜ್ ಪಾಟೀಲ್ ಸೇಡಂ?