Publish Date: Tue, 07 Dec 2021 (08:46 IST)
Updated Date: Tue, 07 Dec 2021 (09:08 IST)
ಭೋಪಾಲ್: 17 ವರ್ಷದ ಅಪ್ರಾಪ್ತ ಬಾಲಕಿಗೆ ಕಾಮೋತ್ತೇಜಕ ಔಷಧ ನೀಡಿ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದಲ್ಲದೆ, ಆಕೆಯ ಸಾವಿಗೆ ಕಾರಣವಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಆರೋಪಿಯ ಕಾಮಪಿಪಾಸಿಗೆ ಬಾಲಕಿಗೆ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾಳೆ. ಸಾವಿಗೂ ಮೊದಲು ತನ್ನ ಮೇಲಾದ ಬಲಾತ್ಕಾರದ ವಿಚಾರವನ್ನು ಮನೆಯವರಿಗೆ ತಿಳಿಸಿದ್ದಾಳೆ.
ಇದೀಗ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಸುಳಿವು ನೀಡಿದವರಿಗೆ 30 ಸಾವಿರ ರೂ. ಬಹುಮಾನ ಘೋಷಿಸಲಾಗಿದೆ. ಇನ್ನು, ಆರೋಪಿಯನ್ನು ಇದುವರೆಗೆ ಬಂಧಿಸಲಾಗದ ಪೊಲೀಸರ ವಿರುದ್ಧ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.