ಜೈಪುರ: 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ನಾಲ್ವರು ಯುವಕರನ್ನು ರಾಜಸ್ಥಾನ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಸಾಮೂಹಿಕ ಅತ್ಯಾಚಾರವೆಸಗಿದ ಕಾಮುಕರು ಬಳಿಕ ಘಟನೆಯನ್ನು ಯಾರಲ್ಲೂ ಹೇಳದಂತೆ ಬೆದರಿಕೆ ಹಾಕಿದ್ದರು. ಎರಡು ದಿನಗಳ ಬಳಿಕ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.
ಅದರಂತೆ ನಾಲ್ವರನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ.