Publish Date: Wed, 06 Jul 2022 (11:00 IST)
Updated Date: Wed, 06 Jul 2022 (09:17 IST)
ನವದೆಹಲಿ: 12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ 16 ವರ್ಷದ ಅಪ್ರಾಪ್ತ ಆಕೆ ಗರ್ಭಿಣಿಯಾಗುವಂತೆ ಮಾಡಿದ್ದಾನೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿ ಬಾಲಕಿಯ ಸಂಬಂಧಿಕನಾಗಿದ್ದ. ಕುಟುಂಬಸ್ಥರ ಮದುವೆಯೊಂದಕ್ಕೆ ಹೋಗಿದ್ದಾಗ ಆರೋಪಿ ಕೃತ್ಯವೆಸಗಿದ್ದಾನೆ. ಆ ಸಂದರ್ಭದಲ್ಲಿ ಬಾಲಕಿ ಈ ವಿಚಾರವನ್ನು ಯಾರ ಬಳಿಯೂ ಹೇಳಿರಲಿಲ್ಲ.
ಆದರೆ ಕೆಲವು ದಿನಗಳ ಬಳಿಕ ಕೆಳಹೊಟ್ಟೆನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ತಾಯಿ ವೈದ್ಯರ ಬಳಿ ಕರೆದೊಯ್ದಿದ್ದರು. ಈ ವೇಳೆ ಆಕೆ ಗರ್ಭಿಣಿ ಎನ್ನುವುದು ತಿಳಿದುಬಂದಿದೆ. ಆಗ ನಡೆದ ವಿಚಾರವನ್ನು ತಿಳಿಸಿದ್ದಾಳೆ. ತಕ್ಷಣವೇ ಪೊಲೀಸರಿಗೆ ದೂರು ನೀಡಲಾಯಿತು.