Select Your Language

Notifications

webdunia
webdunia
webdunia
webdunia

ಸಂಬಂಧಿಕನಿಂದಲೇ ಅಪ್ರಾಪ್ತ ಬಾಲಕಿಯ ಮೇಲೆ ರೇಪ್

ಸಂಬಂಧಿಕನಿಂದಲೇ ಅಪ್ರಾಪ್ತ ಬಾಲಕಿಯ ಮೇಲೆ ರೇಪ್
ಮೇಲ್‌ಬಂದಾ , ಗುರುವಾರ, 27 ಆಗಸ್ಟ್ 2015 (20:41 IST)
ಅಪ್ರಾಪ್ತ ಬಾಲಕಿಯ ಮೇಲೆ ಕಾಮುಕ ಸಂಬಂಧಿಯೊಬ್ಬ ಅತ್ಯಾಚಾರವೆಸಗಿದ ಘಟನೆ ಲಾಲೌಲಿ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಬಾಲಕಿಯ ಕುಟುಂಬದವರು ಆರೋಪಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ನಂತರ ಪೊಲೀಸರು ಆತನ ಬಂಧನಕ್ಕಾಗಿ ಜಾಲ ಬೀಸಿದ್ದಾರೆ ಎನ್ನಲಾಗಿದೆ.
 
ಅತ್ಯಾಚಾರವೆಸಗಿದ ಆರೋಪಿ ಪರಾರಿಯಾಗಿದ್ದಾನೆ. ಅತ್ಯಾಚಾರಕ್ಕೊಳಗಾದ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು ವರದಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.
 
ಮನೆಯಲ್ಲಿ ಏಕಾಂಗಿಯಾಗಿದ್ದ ಬಾಲಕಿಯನ್ನು ಓಲೈಸಲು ಆರೋಪಿ ಯತ್ನಿಸಿದ್ದಾನೆ. ಆದರೆ ಬಾಲಕಿ ಅದಕ್ಕೆ ಆಸ್ಪದ ನೀಡದಿದ್ದಾಗ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 

Share this Story:

Follow Webdunia kannada