Publish Date: Mon, 11 Apr 2022 (09:20 IST)
Updated Date: Mon, 11 Apr 2022 (09:38 IST)
ಪುಣೆ: ಸಾರ್ವಜನಿಕ ಶೌಚಾಲಯದಲ್ಲಿ ಶೌಚಕ್ಕೆ ತೆರಳಿದ್ದ 12 ವರ್ಷದ ಬಾಲಕಿ ಮೇಲೆ ಪಾಪಿಯೊಬ್ಬ ಅತ್ಯಾಚಾರವೆಸಗಿದ್ದಾನೆ.
ಇತ್ತೀಚೆಗೆ ರೈಲ್ವೇ ನಿಲ್ದಾಣದಲ್ಲಿ ಶೌಚಾಲಯಕ್ಕೆ ತೆರಳಿದ್ದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆದಿತ್ತು. ಇದೀಗ ಮತ್ತೆ ಅಂತಹದ್ದೇ ಘಟನೆ ನಡೆದಿದೆ.
ಬಾಲಕಿಯನ್ನು ಹಿಂಬಾಲಿಸಿದ್ದ ಆರೋಪಿ ಶೌಚಾಲಯದಲ್ಲಿ ನೆಲಕ್ಕೆ ಬೀಳಿಸಿ ದೈಹಿಕವಾಗಿ ಕಿರುಕುಳ ನೀಡಿ ಅತ್ಯಾಚಾರವೆಸಗಿದ್ದಾನೆ. ಈ ಸಂಬಂಧ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಪರಿಚಿತ ವ್ಯಕ್ತಿಯೇ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ.