Select Your Language

Notifications

webdunia
webdunia
webdunia
webdunia

ಅಪ್ರಾಪ್ತಳ ಮೇಲೆ ಮೂವರು ಆರೋಪಿಗಳಿಂದ ಗ್ಯಾಂಗ್‌ರೇಪ್

ಅಪ್ರಾಪ್ತಳ ಮೇಲೆ ಮೂವರು ಆರೋಪಿಗಳಿಂದ ಗ್ಯಾಂಗ್‌ರೇಪ್
ಮಯೂರ್‌ಟೋಲಾ , ಸೋಮವಾರ, 27 ಜುಲೈ 2015 (16:44 IST)
ಬುಡಕಟ್ಟು ಸಮುದಾಯದ ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಆರೋಪಿಗಳು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ವರದಿಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ಪಾಕುರ್ ಜಿಲ್ಲೆಯ ಮಯೂರ್‌ಟೋಲಾ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಅಪ್ರಾಪ್ತಳನ್ನು ಮೂವರು ಆರೋಪಿಗಳು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ.
 
ಬೆಳಿಗ್ಗೆಯಿಂದ ಸಂಜೆಯವರೆಗೆ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ ಆರೋಪಿಗಳು ಆಕೆ ಪ್ರಜ್ಞೆ ತಪ್ಪಿದ ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ.
 
ಪ್ರಜ್ಞೆ ಮರಳಿದ ನಂತರ ಗ್ರಾಮಕ್ಕೆ ಬಂದ ಬಾಲಕಿ ಮೂವರು ಆರೋಪಿಗಳು ಗ್ಯಾಂಗ್‌ರೇಪ್ ಎಸಗಿರುವ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ಪೋಷಕರು ಪೊಲೀಸ್ ಠಾಣೆಗೆ ತೆರಳಿ ಆರೋಪಿಗಳ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.
 
ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರಾರಿಯಾದ ಆರೋಪಿಗಳ ಪತ್ತೆಗೆ ಜಾಲ ಬೀಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 

Share this Story:

Follow Webdunia kannada