Publish Date: Fri, 10 Mar 2023 (10:07 IST)
Updated Date: Fri, 10 Mar 2023 (10:10 IST)
ಟೆಹ್ರಾನ್ : ಕಳೆದ ವರ್ಷ ನವೆಂಬರ್ನಿಂದ ಇರಾನ್ನಲ್ಲಿ ಹೆಣ್ಣುಮಕ್ಕಳಿಗೆ ಶಾಲೆಗೆ ಹೋಗದಂತೆ ತಡೆಯಲು ನಿಗೂಢವಾಗಿ ವಿಷವುಣಿಸಲಾಗುತ್ತಿತ್ತು.
ದೇಶಾದ್ಯಂತ ಸುಮಾರು 5,000 ವಿದ್ಯಾರ್ಥಿಗಳು ವಿಷಪ್ರಾಶನಕ್ಕೊಳಗಾಗಿ ಅಸ್ವಸ್ಥರಾದ ಬಳಿಕ ಇದೀಗ ಅಲ್ಲಿನ ಗುಪ್ತಚರ ಸಂಸ್ಥೆ ಘಟನೆಗೆ ಸಂಬಂಧಪಟ್ಟಂತೆ ಮೊದಲ ಬಾರಿ ಬಂಧನ ಕಾರ್ಯವನ್ನು ಪ್ರಾರಂಭಿಸಿದೆ.
ಇರಾನ್ನ ಸುಮಾರು 6 ಪ್ರಾಂತ್ಯಗಳಲ್ಲಿ ವಿದ್ಯಾರ್ಥಿನಿಯರಿಗೆ ವಿಷವುಣಿಸಿದ ಆರೋಪದ ಮೇಲೆ ಕೆಲ ವಿದ್ಯಾರ್ಥಿನಿಯರ ಪೋಷಕರು ಸೇರಿದಂತೆ ಹಲವರನ್ನು ಬಂಧನ ಮಾಡಲಾಗಿದೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ.
ವರದಿಗಳ ಪ್ರಕಾರ, ಇರಾನ್ನ ಉಪ ಆಂತರಿಕ ಸಚಿವ ಮಜಿದ್ ಮಿರಹ್ಮಾಡಿ, ಗುಪ್ತಚರ ಸಂಸ್ಥೆಗಳು ಆರೋಪಿಗಳ ಬಂಧನ ಕಾರ್ಯವನ್ನು ಪ್ರಾರಂಭಿಸಿದೆ. ಹಲವರನ್ನು ಈಗಾಗಲೇ ಬಂಧನ ಮಾಡಲಾಗಿದೆ. ಸಂಬಂಧಿತ ಏಜೆನ್ಸಿಗಳು ಘಟನೆ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.