ಸ್ನಾನಕ್ಕೆಂದು ಹೋದ ಎಂಜಿನಿಯರಿಂಗ್ ವಿದ್ಯಾರ್ಥಿಗಳು ನಾಪತ್ತೆ?

Webdunia
ಶನಿವಾರ, 30 ಜುಲೈ 2022 (16:05 IST)
ಹೈದರಾಬಾದ್ : ಅನಕಾಪಲ್ಲಿಯ DIET ಎಂಜಿನಿಯರಿಂಗ್ ಕಾಲೇಜಿನ ಏಳು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಆಂಧ್ರಪ್ರದೇಶದ ಪುಡಿಮಡಕ ಬೀಚ್ನಲ್ಲಿ ನಾಪತ್ತೆಯಾಗಿದ್ದಾರೆ.

ಶುಕ್ರವಾರ ಪೊಲೀಸರು ಇಬ್ಬರು ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಿದ್ದು, ಅವರಲ್ಲಿ ಪವನ್ ಕುಮಾರ್ ಎಂಬ ಯುವಕ ಶವವಾಗಿ ಪತ್ತೆಯಾಗಿದ್ದು, ಮತ್ತೋರ್ವ ತೇಜ ಅವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಸ್ನಾನ ಮಾಡಲೆಂದು ಏಳು ಮಂದಿ ವಿದ್ಯಾರ್ಥಿಗಳು ಸಮುದ್ರಕ್ಕೆ ಇಳಿದಿದ್ದರು. ಈ ವೇಳೆ ಜೋರಾಗಿ ಬಂದ ಅಲೆ ಅವರನ್ನು ಎಳೆದೊಯ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇದೀಗ ಶನಿವಾರ ರಕ್ಷಣಾ ಅಧಿಕಾರಿಗಳು ಮತ್ತಿಬ್ಬರು ವಿದ್ಯಾರ್ಥಿಗಳ ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಮೃತರನ್ನು ಜಸ್ವಂತ್ ಕುಮಾರ್ ಮತ್ತು ಪೆಂಟಕೋಟ ಗಣೇಶ್ ಎಂದು ಗುರುತಿಸಲಾಗಿದೆ.

ಉಳಿದ ಮೂವರು ವಿದ್ಯಾರ್ಥಿಗಳಾದ ಕಂಪಾರ ಜಗದೀಶ್, ಬಯ್ಯಪುನೇನಿ ಸತೀಶ್ ಕುಮಾರ್ ಮತ್ತು ಪುಡಿ ರಾಮಚಂದು ಅವರನ್ನು ಹುಡುಕಲು ಹೆಲಿಕಾಪ್ಟರ್ ಮತ್ತು ಕೋಸ್ಟ್ ಗಾರ್ಡ್ ಬೋಟ್ಗಳನ್ನು ನಿಯೋಜಿಸಲಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಎನ್ ರವಿಕುಮಾರ್

ಕೋಗಿಲು ಬಡಾವಣೆ ಅಕ್ರಮ ಮನೆಗಳ ತೆರವು; ಸಿಎಂ, ಡಿಸಿಎಂ ಯೂ ಟರ್ನ್: ವಿಜಯೇಂದ್ರ

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ ಈ ಎದೆ ಝಲ್ಲೆನಿಸುವ ಆಕ್ಸಿಡೆಂಟ್ ವಿಡಿಯೋ

ಮನೆ ಕೋರಿ ಕರ್ನಾಟಕದ ಅರ್ಜಿ ಸಲ್ಲಿಸಿದವರ ಗತಿ ಏನು: ಶೋಭಾ ಕರಂದ್ಲಾಜೆ

ರಾಹುಲ್ ಗಾಂಧಿಗಿಂತ ಮೊದಲು ನೆಹರೂ ಕುಟುಂಬದಲ್ಲಿ ನಡೆಯುತ್ತಿದೆ ಮದುವೆ: ಯಾರದ್ದು ನೋಡಿ

ಮುಂದಿನ ಸುದ್ದಿ
Show comments