Select Your Language

Notifications

webdunia
webdunia
webdunia
webdunia

ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕರಾಗಿ ಎಂ.ಕೆ.ಸ್ಟಾಲಿನ್

ಎಂ.ಕೆ.ಸ್ಟಾಲಿನ್
ಚೆನ್ನೈ , ಮಂಗಳವಾರ, 24 ಮೇ 2016 (14:48 IST)
ಡಿಎಂಕೆ ಮುಖಂಡ ಎಂ.ಕೆ.ಸ್ಟಾಲಿನ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದರಿಂದ, ಸ್ಟಾಲಿನ್ ತಮಿಳುನಾಡು ವಿಧಾನಸಭೆಯಲ್ಲಿ ವಿಪಕ್ಷ ನಾಯಕರಾಗಿ ಬಡ್ತಿ ಪಡೆದಿದ್ದಾರೆ. 
 
234 ಸದಸ್ಯ ಬಲದ ತಮಿಳುನಾಡು ವಿಧಾಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಸೇರಿದಂತೆ 89 ಶಾಸಕರನ್ನು ಹೊಂದಿರುವ ಡಿಎಂಕೆ ಏಕೈಕ ದೊಡ್ಡ ವಿಪಕ್ಷವಾಗಿ ಹೊರಹೊಮ್ಮಿದೆ. 
 
ಕಳೆದ ವಿಧಾನಸಭೆಯಲ್ಲಿ ಡಿಎಂಕೆ ಪಕ್ಷ ಕೇವಲ 23 ಶಾಸಕರನ್ನು ಹೊಂದಿತ್ತು. ಡಿಎಂಡಿಕೆ ಪಕ್ಷ ಎಐಎಡಿಎಂಕೆ ಪಕ್ಷದ ಮೈತ್ರಿಯೊಂದಿಗೆ 29 ಸ್ಥಾನಗಳಲ್ಲಿ ಜಯಗಳಿಸಿತ್ತು. ಡಿಎಂಡಿಕೆ ಪಕ್ಷದ ಮುಖ್ಯಸ್ಥ ವಿಜಯ್ ಕಾಂತ್ ವಿಪಕ್ಷ ನಾಯಕರಾಗಿ ಸೇವೆ ಸಲ್ಲಿಸಿದ್ದರು.  
 
ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿಯವರ ಸಮ್ಮುಖದಲ್ಲಿ ನಡೆದ ಡಿಎಂಕೆ ಶಾಸಕರ ಸಭೆಯಲ್ಲಿ ಸ್ಟಾಲಿನ್ ಅವರನ್ನು ನಾಯಕರಾಗಿ ಆಯ್ಕೆ ಮಾಡಲಾಗಿದೆ.
 
ಕರುಣಾನಿಧಿಯವರ ಉತ್ತರಾಧಿಕಾರಿ ಎಂದೇ ಬಿಂಬಿತರಾದ ಸ್ಟಾಲಿನ್, 1996 ರಿಂದ 2002 ರವರೆಗೆ ಚೆನ್ನೈ ಮೇಯರ್ ಆಗಿ ಸೇವೆ ಸಲ್ಲಿಸಿದ್ದರು. ನಂತರ ಕರುಣಾನಿಧಿಯವರ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಸ್ಥಳೀಯ ಅಡಳಿತ ಖಾತೆಯ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. 

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ದಾವೂದ್‌ ಇಬ್ರಾಹಿಂನನ್ನು ಭಾರತಕ್ಕೆ ಮರಳಿ ತರಲಾಗುವುದು: ರಾಜನಾಥ್ ಸಿಂಗ್