Publish Date: Fri, 17 Dec 2021 (10:04 IST)
Updated Date: Fri, 17 Dec 2021 (10:05 IST)
ನವದೆಹಲಿ: ಇತ್ತೀಚೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗಲೇ ಮೊಬೈಲ್ ಕಿತ್ತುಕೊಂಡು ಹೋಗುವ ಪ್ರಕರಣಗಳು ಸಾಮಾನ್ಯವಾಗಿಬಿಟ್ಟಿದೆ. ಆದರೆ ಇಲ್ಲಿ ಖದೀಮ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾನೆ.
ಬೈಕ್ ಮೇಲೆ ಬಂದ ಖದೀಮ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಕೆಲವು ಹೆಜ್ಜೆಗಳಷ್ಟು ದೂರ ಎಳೆದುಕೊಂಡು ಹೋಗಿ ಆಕೆಯ ಕೈಯಲ್ಲಿದ್ದ ಮೊಬೈಲ್ ಕಿತ್ತುಕೊಂಡು ಓಡಿದ್ದಾನೆ.
ನಡು ರಸ್ತೆಯಲ್ಲಿ ಬಿದ್ದಿದ್ದ ಮಹಿಳೆಯನ್ನು ಸ್ಥಳೀಯರು ರಕ್ಷಿಸಿ ರಸ್ತೆ ಬದಿಗೆ ಕರೆ ತಂದಿದ್ದಾರೆ. ಈ ದೃಶ್ಯಗಳೆಲ್ಲವೂ ಸ್ಥಳೀಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.