ಡೆಹ್ರಾಡೂನ್ : ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಒಬ್ಬಳು ಸಾವನಪ್ಪಿದ ಕೋವಿಡ್ ರೋಗಿಯ ಮೊಬೈಲ್ ಫೋನ್ ಅನ್ನು ಕದ್ದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.
									
										
								
																	
ಮೃತನ ಪುತ್ರ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾನೆ. ತನ್ನ ತಂದೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಆಸ್ಪತ್ರೆಯಲ್ಲಿಯೇ ನಿಧನರಾಗಿದ್ದು, ಆದರೆ ಫೋನ್ ಕಳ್ಳತನವಾಗಿದೆ ಎಂದು ದೂರಿದ್ದಾರೆ.
									
			
			 
 			
 
 			
			                     
							
							
			        							
								
																	ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಮೊಬೈಲ್ ಫೋನ್ ಅನ್ನು ನರ್ಸ್ ಕದ್ದು ತನ್ನ ಸ್ನೇಹಿತನಿಗೆ ನೀಡಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ವಿಚಾರಣೆ ನಡೆಯುತ್ತಿದೆ.