ಪ್ರಧಾನಿ ಮೋದಿಗೆ ಅಮಿತ್ ಶಾ ಕಂಡ್ರೆ ಭಯ: ರಾಹುಲ್ ಗಾಂಧಿ

Webdunia
ಸೋಮವಾರ, 11 ಡಿಸೆಂಬರ್ 2017 (16:21 IST)
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಂದ ಪ್ರಧಾನಿ ಮೋದಿಗೆ ಭಯವಾಗುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಗುಜರಾತ್‌ನ ತಾರಾಡ್ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಎರಡನೇ ಹಂತದ ಚುನಾವಣೆ ಪ್ರಚಾರದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
 
ಅಮಿತ್ ಶಾ ಪುತ್ರ ಜಯ್ ಶಾಹ್ ಕೇವಲ ಮೂರು ತಿಂಗಳಲ್ಲಿ 50 ಸಾವಿರ ರೂಪಾಯಿಗಳಿಂದ 80 ಕೋಟಿ ರೂಪಾಯಿಗಳನ್ನು ಸಂಪಾದಿಸಿದ್ದಾರೆ. ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇನೆ ಎಂದು ಗುಡುಗಿದ್ದ ಮೋದಿಗೆ ಅಮಿತ್ ಶಾ ಕಂಡರೆ ಭಯವಾಗಿದೆ. ಅಮಿತ್ ಶಾ ಬಗ್ಗೆ ಒಂದೇ ಒಂದು ಹೇಳಿಕೆ ನೀಡಿಲ್ಲ. ಪ್ರಧಾನಿ ಮೋದಿ ತಮ್ಮ ಯಾವುದೇ ಭಾಷಣದಲ್ಲಿ ಭ್ರಷ್ಟಾಚಾರದ ವಿಷಯವೆತ್ತಿಲ್ಲ ಎಂದು ಲೇವಡಿ ಮಾಡಿದರು. 
 
ಪ್ರಧಾನಿ ಮೋದಿಯವರ ನೋಟು ನಿಷೇಧ, ಜಿಎಸ್‌ಟಿ ಜಾರಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್, ಕಳೆದ 2014ರ ಲೋಕಸಭೆ ಚುನಾವಣೆಯಲ್ಲಿ ದೇಶದ ಪ್ರತಿಯೊಬ್ಬ ನಾಗರಿಕನ ಬ್ಯಾಂಕ್ ಖಾತೆಯಲ್ಲಿ 15 ಲಕ್ಷ ರೂಪಾಯಿಗಳನ್ನು ಜಮಾ ಮಾಡುವುದಾಗಿ ಘೋಷಿಸಿದ್ದರು. ಆದರೆ, ಅಧಿಕಾರಕ್ಕೆ ಬಂದ ನಾಲ್ಕು ವರ್ಷಗಳು ಕಳೆದರೂ ಯಾವೊಬ್ಬ ನಾಗರಿಕನಿಗೆ 15 ಪೈಸೆ ಕೂಡಾ ಹಾಕಿಲ್ಲ ಎಂದರು. 
 
ಫ್ರಧಾನಿ ಮೋದಿಯವರ ಸರಕಾರ ಸೂಟ್ ಬೂಟ್ ಸರಕಾರವಾಗಿದ್ದು, ಟಾಟಾ ಮತ್ತು ಆದಾನಿಯಂತಹ ಉದ್ಯಮಿಗಳಿಗಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಕಿಡಿಕಾರಿದರು.
 
ಪಾಕಿಸ್ತಾನ,  ಕಾಂಗ್ರೆಸ್ ಪಕ್ಷದೊಂದಿಗೆ ಶಾಮೀಲಾಗಿ ಗುಜರಾತ್ ಚುನಾವಣೆಯಲ್ಲಿ ಮಧ್ಯಪ್ರವೇಶ ಮಾಡುತ್ತಿದೆ ಎನ್ನುವ ಪ್ರಧಾನಿ ಮೋದಿಗೆ ಹೇಳಿಕೆಗೆ ಟಾಂಗ್ ನೀಡಿದ ರಾಹುಲ್, ಗುಜರಾತ್‌ನಲ್ಲಿ ಚುನಾವಣೆ ನಡೆಯುತ್ತಿವೆ. ಮೋದಿ ಮಾತ್ರ ಜಪಾನ್, ಅಫ್ಘಾನಿಸ್ತಾನ್ ಮತ್ತು ಪಾಕಿಸ್ತಾನದ ಮಾತನಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಜಿ ಪ್ರಧಾನಿ ಎಚ್ ದೇವೇಗೌಡರ ಆರೋಗ್ಯದ ಬಗ್ಗೆ ಕುಮಾರಸ್ವಾಮಿಯಿಂದ ಬಿಗ್‌ ಅಪ್ಡೇಟ್‌

17 ಮಕ್ಕಳು ಸಾವು ಪ್ರಕರಣ: ಕೆಮ್ಮಿನ ಮೂರು ಸಿರಪ್ ತಯಾರಿಕೆಗೆ ಬ್ರೇಕ್‌

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

ಶೂ ಎಸೆದ ಪ್ರಕರಣ: ನನ್ನ ಸಹೋದರನಿಗೆ ತುಂಬಾನೇ ನೋವಾಗಿದೆ ಎಂದ ಸಿಜೆಐ

ಮೈಸೂರು ರೇಪ್ ಆಂಡ್ ಮರ್ಡರ್ ಕೇಸ್‌: ಆರೋಪಿಯ ಗುರುತು ಕೊನೆಗೂ ಪತ್ತೆ

ಮುಂದಿನ ಸುದ್ದಿ
Show comments