ನವದೆಹಲಿ : ಭಾರತವು ಭಯೋತ್ಪಾದನೆ ಮುಕ್ತ ಪ್ರದೇಶವನ್ನು ಬಯಸುತ್ತದೆ ಎಂದು ನೂತನವಾಗಿ ಆಯ್ಕೆಯಾದ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದರು.
ಪಾಕಿಸ್ತಾನದ ಪ್ರಧಾನಿಯಾಗಿ ಆಯ್ಕೆಯಾದ ಮಹಮ್ಮದ್ ಶೆಹಬಾಜ್ ಷರೀಫ್ ಅವರಿಗೆ ಅಭಿನಂದನೆಗಳು. ಭಾರತವು ಭಯೋತ್ಪಾದನೆ ನೆರಳು ಇಲ್ಲದೇ, ಶಾಂತಿ ಮತ್ತು ಸ್ಥಿರತೆಯನ್ನು ಬಯಸುತ್ತದೆ.
ಇದರಿಂದ ನಾವು ನಮ್ಮ ಅಭಿವೃದ್ಧಿ ಸವಾಲುಗಳ ಮೇಲೆ ಕೇಂದ್ರೀಕರಿಸಬಹುದು. ಜೊತೆಗೆ ನಮ್ಮ ಜನರ ಯೋಗಕ್ಷೇಮ ಮತ್ತು ಸಮೃದ್ಧಿಯನ್ನು ಖಚಿತಪಡಿಸಿಕೊಳ್ಳಬಹುದು ಎಂದು ತಿಳಿಸಿದರು.
ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಅಧ್ಯಕ್ಷ ಮತ್ತು ವಿರೋಧ ಪಕ್ಷದ ಮಾಜಿ ನಾಯಕ ಶೆಹಬಾಜ್ ಷರೀಫ್ ಅವರು ರಾಷ್ಟ್ರೀಯ ಅಸೆಂಬ್ಲಿಯಿಂದ 174 ಮತಗಳನ್ನು ಗಳಿಸಿ ಪಾಕಿಸ್ತಾನದ 23ನೇ ಪ್ರಧಾನಿಯಾಗಿ ಆಯ್ಕೆಯಾದರು.