Webdunia - Bharat's app for daily news and videos

Install App

ಕಂಚಿನ ಪದಕ ಗೆದ್ದ ಸರಬ್ಜೋತ್‌ ಸಿಂಗ್‌ಗೆ ಮೋದಿಯಿಂದ ಶುಭಾಶಯ

Sampriya
ಮಂಗಳವಾರ, 30 ಜುಲೈ 2024 (18:52 IST)
Photo Courtesy X
ಪ್ಯಾರಿಸ್: ಇಲ್ಲಿ ನಡೆಯುತ್ತಿರುವ ಒಲಿಂಪಿಕ್ ಕ್ರೀಡಾಕೂಟದಲ್ಲಿ ಏರ್ ಪಿಸ್ತೂಲ್ ಮಿಶ್ರ ತಂಡದಲ್ಲಿ ಸರಬ್ಜೋತ್ ಸಿಂಗ್ ಮತ್ತು ಸಹ ಶೂಟರ್ ಮನು ಭಾಕರ್ ಅವರು ಭಾರತಕ್ಕೆ ಕಂಚಿನ ಪದಕವನ್ನು ತಂದುಕೊಟ್ಟಿದ್ದಾರೆ. ‌

ಇನ್ನೂ ವಿಶೇಷ ಸಾಧನೆ ಮಾಡಿದ ಕಂಚಿನ ಪದಕ ವಿಜೇತ ಸರಬ್ಜೋತ್ ಸಿಂಗ್ ಜತೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿ ಪ್ಯಾರಿಸ್ ಕ್ರೀಡಾಕೂಟದಲ್ಲಿ ಸಾಧನೆಗಾಗಿ ಅವರನ್ನು ಅಭಿನಂದಿಸಿದ್ದಾರೆ.

ನಿಮಗೆ ಹೃತ್ಪೂರ್ವಕ ಅಭಿನಂದನೆಗಳು. ನೀವು ಭಾರತದ ಕೀರ್ತಿಯನ್ನು ಎತ್ತರಕ್ಕೆ ಕೊಂಡೊಯ್ದಿದ್ದೀರಿ ಎಂದು ಪ್ರಧಾನಿ ಅವರು ಸಿಂಗ್‌ಗೆ ಶುಭಕೋರಿದ್ದಾರೆ.

ಸರಬ್ಜೋತ್ ಸಿಂಗ್ ಮತ್ತು ಸಹ ಶೂಟರ್ ಮನು ಭಾಕರ್ ಅವರು ನಡೆಯುತ್ತಿರುವ ಕ್ರೀಡಾಕೂಟದಲ್ಲಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಕಂಚಿನ ಪದಕವನ್ನು ಗೆದ್ದಿದ್ದಾರೆ. 22ರ ಹರೆಯದ ಇಬ್ಬರು ಆಟಗಾರರು ದಕ್ಷಿಣ ಕೊರಿಯಾದ ಲೀ ವೊನೊಹೊ ಮತ್ತು ಓಹ್ ಯೆ ಜಿನ್ ಅವರನ್ನು 16-10 ಅಂತರದಿಂದ ಚಟೌರೊಕ್ಸ್‌ನ ಶೂಟಿಂಗ್ ರೇಂಜ್‌ನಲ್ಲಿ ಸೋಲಿಸಿ ಕಂಚಿನ ಪದಕಕ್ಕೆ ಕೊರಳೊಡ್ಡಿದರು.

ಭಾನುವಾರ ಇದೇ ಸ್ಥಳದಲ್ಲಿ ನಡೆದ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾಕರ್ ಕಂಚಿನ ಪದಕ ಗೆದ್ದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments