Select Your Language

Notifications

webdunia
webdunia
webdunia
webdunia

ಉದ್ಯೋಗಾಕಾಂಕ್ಷಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಮೋದಿ

webdunia
ನವದೆಹಲಿ , ಬುಧವಾರ, 23 ನವೆಂಬರ್ 2022 (11:31 IST)
ನವದೆಹಲಿ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ರೋಜಗಾರ್ ಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದು ಹೊಸದಾಗಿ ನೇಮಕಗೊಂಡ ನೌಕರರಿಗೆ 71 ಸಾವಿರ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದಿದ್ದಾರೆ.

ವರ್ಚುವಲ್ ಮೂಲಕ ಕಾರ್ಯಮಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ, ಶಿಕ್ಷಕರು, ನರ್ಸ್, ಫಾರ್ಮಾಸಿಸ್ಟ್, ವೈದ್ಯರು ಸೇರಿದಂತೆ ವಿವಿಧ ಕ್ಷೇತ್ರದ 71 ಸಾವಿರ ವಿವಿಧ ಕ್ಷೇತ್ರದ ಉದ್ಯೋಗಾಕಾಂಕ್ಷಿಗಳಿಗೆ ನೇಮಕಾತಿ ಪತ್ರ ಹಸ್ತಾಂತರ ಮಾಡಿದ್ದಾರೆ.

ಅಲ್ಲದೇ ನೇಮಕಗೊಂಡ ನೌಕರರಿಗೆ ಆನ್ಲೈನ್ನಲ್ಲಿ ತರಬೇತಿ ನೀಡುವ `ಕರ್ಮಯೋಗಿ ಪ್ರಾರಂಭ್’ ಆನ್ಲೈನ್ ಕಾರ್ಯಕ್ರಮಕ್ಕೂ ಚಾಲನೆ ನೀಡಿದ್ದಾರೆ.  ಈ ಕುರಿತು ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇಂದು 45 ಪ್ರಮುಖ ನಗರಗಳಲ್ಲಿ 71 ಸಾವಿರಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗುತ್ತಿದೆ.

ಇದು ಸಾವಿರಾರು ಯುವಜನರಿಗೆ ಸಂತಸದ ವಿಷಯ. ಕಳೆದ ತಿಂಗಳೂ ಸಹ 75 ಸಾವಿರ ಯುವಜನರಿಗೆ ನೇಮಕಾತಿ ನೀಡಲಾಗಿದೆ. ಇದು ರಾಷ್ಟ್ರದ ಅಭಿವೃದ್ಧಿಯ ವೇಗ ಹೆಚ್ಚಿಸುವ ನಮ್ಮ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರಿ ಗೋಶಾಲೆ ಆರಂಭಕ್ಕೆ ಡೆಡ್ಲೈನ್ : ಪ್ರಭು ಚೌಹಾಣ್