2002ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಅಂದಿನ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿಗೆ ವಿಶೇಷ ತನಿಖಾ ತಂಡ ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು.
ಅರ್ಜಿಯನ್ನ ಸುಪ್ರೀಂ ಕೋರ್ಟ್ ನಿರಾಕರಿಸಿ ತನಿಖಾ ತಂಡದ ವರದಿಯನ್ನ ಎತ್ತಿ ಹಿಡಿದಿತ್ತು. ಇನ್ನು ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಳೆದ 19 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಸುಳ್ಳು ಆರೋಪಗಳನ್ನು ವಿಷಕಂಠನಂತೆ ಸಹಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಕಳೆದ 19 ವರ್ಷಗಳಿಂದ ಪ್ರಧಾನಿ ಮೋದಿ ಸುಳ್ಳು ಆರೋಪಗಳನ್ನು ಸಹಿಸಿಕೊಳ್ಳುತ್ತಾ ಬಂದಿದ್ದಾರೆ. ಅಂದಿನ ಕಾಳಗಟ್ಟದಲ್ಲಿ ಪ್ರಧಾನಿಯನ್ನು ಬೆಂಬಲಿಸಿ ಯಾವುದೇ ಪ್ರತಿಭಟನೆ ನಡೆಯಲಿಲ್ಲ. ಆದರೆ, ವಿಚಾರಣೆ ನಡೆಸಿದಕ್ಕಾಗಿ ಕಾಂಗ್ರೆಸ್ಸಿನವರು ವಾರಗಟ್ಟಲೆ ಪ್ರತಿಭಟನೆ ನಡೆಸಿ ಜನರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ನಾನು ಮೋದಿಯವರನ್ನು ಹತ್ತಿರದಿಂದ ಬಲ್ಲೇ ಇಷ್ಟು ವರ್ಷಗಳ ಕಾಲ ನೋವನ್ನು ಸಹಿಸಿಕೊಂಡು ಸತ್ಯದ ಪರವಾಗಿದ್ದರು ಸಹ ಸುಳ್ಳು ಮೊಕದ್ದಮೆಗಳನ್ನು ಎದುರಿಸಲು ದೃಢ ಸಂಕಲ್ಪ ಇರುವ ವ್ಯಕ್ತಿಯಿಂದ ಮಾತ್ರ ಸಾಧ್ಯ ಎಂದು ಪ್ರಧಾನಿಯನ್ನು ಹಾಡಿ ಹೊಗಳಿದ್ದಾರೆ.