Publish Date: Thu, 20 Jul 2023 (11:52 IST)
Updated Date: Thu, 20 Jul 2023 (12:09 IST)
ನವದೆಹಲಿ : ಕಳೆದ ಎರಡು ತಿಂಗಳಿನಿಂದ ನಡೆಯುತ್ತಿರುವ ಮಣಿಪುರ ಹಿಂಸಾಚಾರದ ಕುರಿತು ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಮಹಿಳೆಯರನ್ನ ಬೆತ್ತಲೆ ಮೆರವಣಿಗೆ ಮಾಡಿದ ವಿಡಿಯೋಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮಣಿಪುರ ಘಟನೆಯು ಸಭ್ಯ ಸಮಾಜಕ್ಕೆ ನಾಚಿಕೆಗೇಡಿನ ಸಂಗತಿಯಾಗಿದೆ. ನನ್ನ ಹೃದಯವು ನೋವು ಮತ್ತು ಕೋಪದಿಂದ ತುಂಬಿದೆ ಎಂದು ಹೇಳಿದರು.