ತಮ್ಮ ಸರ್ಕಾರದ ಸಾಧನೆಗಳನ್ನು ಕೇಂದ್ರ ಸರ್ಕಾರ ತಮ್ಮ ಸರ್ಕಾರದ ಸಾಧನೆ ಎಂಬಂತೆ ಬಿಂಬಿಸಿಕೊಳ್ಳುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆರೋಪಿಸಿದ್ದಾರೆ.
ಮೇಕ್ ಇನ್ ಇಂಡಿಯಾ ಅಭಿಯಾನದ ಜಾಹೀರಾತಿನಲ್ಲಿ ನಮ್ಮ ಸಾಧನೆಗಳನ್ನು ಬಿಜೆಪಿ ನೇತೃತ್ವದ ಸರ್ಕಾರ ತಮ್ಮದೆಂಬಂತೆ ತೋರಿಸಿದೆ ಎಂಬುದು ಅವರ ವಾದ.
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಕೈಗಾರಿಕಾ ನೀತಿ ಮತ್ತು ಉತ್ತೇಜನಾ ಇಲಾಖೆ ಬಿಡುಗಡೆ ಮಾಡಿರುವ ಜಾಹೀರಾತನ್ನು ಅನುಸರಿಸಿ ಅವರು ಈ ಆರೋಪವನ್ನು ಹೊರಿಸಿದ್ದಾರೆ.
ಮೋದಿ ಸರ್ಕಾರ ಆಪ್ ಸರ್ಕಾರದ ಸಾಧನೆಗಳನ್ನು ತನ್ನದೆಂಬಂತೆ ಲೆಕ್ಕ ಹಾಕುತ್ತದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಇತರೇ ಆಪ್ ನಾಯಕರು ಕೂಡ ಈ ಜಾಹೀರಾತಿಗೆ ಸಂಬಂಧಿಸಿದಂತೆ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.