Select Your Language

Notifications

webdunia
webdunia
webdunia
webdunia

ಮೋದಿ ಸರಕಾರದಿಂದ ರೈತರ ಸಾಲ ಮನ್ನಾ ಇಲ್ಲ: ಸಚಿವ ಅರುಣ್ ಜೇಟ್ಲಿ ಸ್ಪಷ್ಟನೆ

ಮೋದಿ ಸರಕಾರದಿಂದ ರೈತರ ಸಾಲ ಮನ್ನಾ ಇಲ್ಲ: ಸಚಿವ ಅರುಣ್ ಜೇಟ್ಲಿ ಸ್ಪಷ್ಟನೆ
ನವದೆಹಲಿ , ಮಂಗಳವಾರ, 20 ಜೂನ್ 2017 (15:51 IST)
ಕೇಂದ್ರ ಸರಕಾರ ಯಾವುದೇ ಕಾರಣಕ್ಕೂ ರೈತರ ಸಾಲ ಮನ್ನಾ ಮಾಡುವುದಿಲ್ಲ ಎಂದು ಕೇಂದ್ರ ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರದಿಂದ ರೈತರ ಸಾಲ ಮನ್ನಾ ಇಲ್ಲ . ಸಾಲ ಮನ್ನಾ ಮಾಡುವ ಯಾವುದೇ ಯೋಚನೆ ಕೂಡಾ ಇಲ್ಲ. ಸಾಲ ಮನ್ನಾದಿಂದ ದೇಶದ ಆರ್ಥಿಕತೆ ಕುಸಿಯುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.
 
ಈಗಾಗಲೇ ಉತ್ತರಪ್ರದೇಶ, ಪಂಜಾಬ್ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಸರಕಾರಗಳು ರೈತರ ಸಾಲ ಮನ್ನಾ ಘೋಷಿಸಿವೆ. ಆದರೆ, ಕೇಂದ್ರ ಸರಕಾರ ಸಾಲ ಮನ್ನಾ ಮಾಡಲು ಸಾಧ್ಯವಿಲ್ಲ ಎಂದು ಖಡಾಖಂಡಿತವಾಗಿ ಹೇಳಿಕೆ ನೀಡಿದೆ 
 
ದೇಶದಲ್ಲಿ ಭೀಕರ ಬರಗಾಲ ಎದುರಾಗಿದ್ದರಿಂದ ರೈತರ ಸಂಕಷ್ಟದಲ್ಲಿದ್ದಾರೆ. ಸಾಲ ಮನ್ನಾ ಮಾಡುವಂತೆ  ರೈತ ಸಂಘಟನೆಗಳು ದೇಶಾದ್ಯಂತ ಹೋರಾಟ ಮಾಡುತ್ತಿದ್ದರೂ ಕೇಂದ್ರ ಸರಕಾರ ಮೌನವಾಗಿದೆ ಎಂದು ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.  

 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಹಾರ್ ರಾಜ್ಯಪಾಲ ರಾಮಾನಾಥ್ ಕೋವಿಂದ್ ರಾಜೀನಾಮೆ