Webdunia - Bharat's app for daily news and videos

Install App

ಪ್ರಧಾನಿ ಮೋದಿ ಸರಕಾರ ದೇಶದ ಜನತೆಯನ್ನು ಭಿಕ್ಷುಕರನ್ನಾಗಿಸಿದೆ: ಮಮತಾ ಬ್ಯಾನರ್ಜಿ

Webdunia
ಮಂಗಳವಾರ, 15 ನವೆಂಬರ್ 2016 (17:32 IST)
ಕಪ್ಪು ಹಣ ಚಲಾವಣೆಗೆ ಕಡಿವಾಣ ಹಾಕಲು ನೋಟು ನಿಷೇಧ ಹೇರುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಜನತೆಯನ್ನು ಭಿಕ್ಷುಕರನ್ನಾಗಿಸಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
 
ನೋಟು ನಿಷೇಧದಿಂದ ಬಡವರಾಗಿ ಎದುರಾಗಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಭೇಟಿ ಮಾಡುತ್ತೇನೆ. ಇತರ ರಾಜಕೀಯ ಪಕ್ಷಗಳ ಮುಖಂಡರು ತಮ್ಮೊಂದಿಗೆ ರಾಷ್ಟ್ರಪತಿ ಭೇಟಿಗೆ ಬರಲಿ ಎನ್ನುವುದು ನಮ್ಮ ಆಶಯವಾಗಿದೆ. ಒಂದು ವೇಳೆ ಬರದಿದ್ದರೆ ನಮ್ಮ ದಾರಿ ನಮಗೆ ಎಂದು ಹೇಳಿದ್ದಾರೆ.
 
ರಾಹುಲ್ ಗಾಂಧಿ, ನಿತೀಶ್ ಕುಮಾರ್, ನವೀನ್ ಪಟ್ನಾಯಕ್, ಮುಲಾಯಂ ಸಿಂಗ್ ಯಾದವ್, ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಚರ್ಚಿಸಿದ್ದೇನೆ. ನಾಳೆ ಟಿಎಂಸಿ ಪಕ್ಷಧ 40 ಸಂಸದರೊಂದಿಗೆ ರಾಷ್ಟ್ರಪತಿಯವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ.
 
ಎಲ್ಲಾ ರಾಜಕೀಯ ಪಕ್ಷಗಳು ನಮ್ಮ ಜೊತೆಯಾದಲ್ಲಿ ಸೂಕ್ತ. ಒಂದು ವೇಳೆ ನಮ್ಮೊಂದಿಗೆ ಅವರು ಬರದಿದ್ದರೆ ನಾನು ಏಕಾಂಗಿಯಾಗಿ ತೆರಳುತ್ತೇನೆ. ಎನ್‌ಸಿಪಿ ಮುಖಂಡ ಒಮರ್ ಅಬ್ದುಲ್ಲಾ ನಮ್ಮ ಜೊತೆ ಬರುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.
 
ರೋಗಿ ಸಾಯುವ ಮುನ್ನವೇ ವೈದ್ಯರನ್ನು ಕರೆಯಬೇಕು. ರೋಗಿ ಸತ್ತ ಮೇಲೆ ವೈದ್ಯರಿಗೆ ಕರೆ ಮಾಡಿದರೆ ಏನು ಪ್ರಯೋಜನ? ಕೂಡಲೇ ರಾಷ್ಟ್ರಪತಿಯವರನ್ನು ಭೇಟಿ ಮಾಡಿ ಚರ್ಚಿಸಿ ಪರಿಹಾರ ಕಂಡುಕೊಳ್ಳುವುದು ಸೂಕ್ತ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಮುಂದಿನ ಸುದ್ದಿ
Show comments