Webdunia - Bharat's app for daily news and videos

Install App

ಮೋದಿ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆ ನಾಶಗೊಳಿಸುತ್ತಿದೆ: ಮಮತಾ

Webdunia
ಶುಕ್ರವಾರ, 22 ಜುಲೈ 2016 (10:29 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ ಕೇಸರಿಕರಣ ಗುರಿಯಾಗಿಸಿಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
 
ಗುಜರಾತ್‌ನಲ್ಲಿ ಗೋವು ರಕ್ಷಣೆ ನೆಪದಲ್ಲಿ ದಲಿತರ ಮೇಲೆ ನಡೆದ ದೌರ್ಜನ್ಯ ಹೇಯ ಕೃತ್ಯವಾಗಿದೆ. ಗೋರಕ್ಷಣೆ ಹೆಸರಲ್ಲಿ ಕೋಮುವಾದವನ್ನು ಹರಡಿಸಲು ಮೋದಿ ಸರಕಾರ ಪ್ರಯತ್ನಿಸುತ್ತಿರುವುದು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಗುಡುಗಿದ್ದಾರೆ.  
 
ತೃಣಮೂಲ ಕಾಂಗ್ರೆಸ್ ಪಕ್ಷ ಆಯೋಜಿಸಿದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ರಾಜ್ಯಗಳ ವಿಷಯಗಳಲ್ಲಿ ಅನಗತ್ಯವಾಗಿ ಹಸ್ತಕ್ಷೇಪ ಮಾಡುತ್ತಿದೆ. ಬಿಜೆಪಿಯನ್ನು ಪ್ರಬಲವಾಗಿ ಎದುರಿಸಲು ಪ್ರಾದೇಶಿಕ ಪಕ್ಷಗಳು ಸಶಕ್ತವಾಗಬೇಕು ಎಂದು ಕರೆ ನೀಡಿದರು. 
 
ಮೋದಿ ಸರಕಾರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹದಗೆಡಿಸಿ, ರಾಜ್ಯಗಳಲ್ಲಿ ಅನಗತ್ಯವಾಗಿ ಮೂಗು ತೂರಿಸುತ್ತಿದೆ. 1993ರಲ್ಲಿ .ಯುವ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆಯ ದಿನವನ್ನು ಹುತಾತ್ಮರ ದಿನವನ್ನಾಗಿ ಪ್ರತಿ ವರ್ಷವು ಆಚರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
 
ಪ್ರಾದೇಶಿಕ ಶಕ್ತಿಗಳನ್ನು ಬಲಪಡಿಸಲು ನಮ್ಮ ಆತ್ಮಿಯ ಗೆಳೆಯರಿಗೆ ನೆರವು ನೀಡಲು ಸಿದ್ದವಾಗಿದ್ದೇನೆ. ಆದರೆ, ನನಗೆ ಪ್ರಧಾನಿಯಾಗುವ ಯಾವುದೇ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ,
 
ನಾನು ಗುಡಿಸಲಿನಲ್ಲಿಯೇ ವಾಸಿಸುತ್ತಾ ರಾಜ್ಯದ ಜನತೆಯ ಸೇವೆ ಮಾಡಬೇಕು ಎನ್ನುವುದೇ ನನ್ನ ಬಯಕೆಯಾಗಿದೆ. ಇದಕ್ಕಿಂತ ಹೆಚ್ಚಿನ ಬಯಕೆ ನನಗಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments