ಬಿಹಾರಾ: ತಮ್ಮ ಹೊಣೆಗಾರಿಯಿಂದ ತಪ್ಪಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಯುವ ಜನತೆಯನ್ನು ಸಾಮಾಜಿಕ ಜಾಲತಾಣಗಳ ದಾಸರನ್ನಾಗಿ ಮಾಡಿದ್ದಾರೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕಿಡಿಕಾರಿದರು.
ಬಿಹಾರದ ಔರಂಗಾಬಾದ್‌ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್, ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಜ್ವಲಂತ ಸಮಸ್ಯೆಗಳಿಂದ ಅವರ ಗಮನವನ್ನು ಬೇರೆಡೆಗೆ ಸೆಳೆಯುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಮಾಧ್ಯಮ ರೀಲ್‌ಗಳಿಗೆ ಯುವಕರನ್ನು ವ್ಯಸನಿಯಾಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪ ಮಾಡಿದರು.
'ಮೋದಿ ನಿಮ್ಮನ್ನು ರೀಲ್ಸ್, ಇನ್‌ಸ್ಟಾಗ್ರಾಂ, ಫೇಸ್‌ಬುಕ್ ವ್ಯಸನಿಯನ್ನಾಗಿ ಮಾಡಲು ಬಯಸುತ್ತಾರೆ. ಇದು 21ನೇ ಶತಮಾನದ ಚಟವಾಗಿದೆ. ಯುವಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಯಸುತ್ತಾರೆ. ಅಲ್ಲದೆ ಶಿಕ್ಷಣ, ಆರೋಗ್ಯ ಹಾಗೂ ಉದ್ಯೋಗ ಕ್ಷೇತ್ರಗಳ ಸಮಸ್ಯೆಗಳಿಗೆ ತಮ್ಮ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡದಿರಲು ಬಯಸುತ್ತಾರೆ' ಎಂದು ಹೇಳಿದ್ದಾರೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು "ಬಿಹಾರದಲ್ಲಿ 'ಮತ ಚೋರಿ' (ಮತ ಕಳ್ಳತನ) ನಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.