ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಮೋದಿ ಯುವಜನತೆಯನ್ನು ರೀಲ್ಸ್ ದಾಸರನ್ನಾಗಿಸಿದ್ದಾರೆ: ರಾಹುಲ್

Sampriya
ಮಂಗಳವಾರ, 4 ನವೆಂಬರ್ 2025 (15:34 IST)
ಬಿಹಾರಾ: ತಮ್ಮ ಹೊಣೆಗಾರಿಯಿಂದ ತಪ್ಪಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಯುವ ಜನತೆಯನ್ನು ಸಾಮಾಜಿಕ ಜಾಲತಾಣಗಳ ದಾಸರನ್ನಾಗಿ ಮಾಡಿದ್ದಾರೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕಿಡಿಕಾರಿದರು. 

ಬಿಹಾರದ ಔರಂಗಾಬಾದ್‌ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್, ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಜ್ವಲಂತ ಸಮಸ್ಯೆಗಳಿಂದ ಅವರ ಗಮನವನ್ನು ಬೇರೆಡೆಗೆ ಸೆಳೆಯುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಮಾಧ್ಯಮ ರೀಲ್‌ಗಳಿಗೆ ಯುವಕರನ್ನು ವ್ಯಸನಿಯಾಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪ ಮಾಡಿದರು.

'ಮೋದಿ ನಿಮ್ಮನ್ನು ರೀಲ್ಸ್, ಇನ್‌ಸ್ಟಾಗ್ರಾಂ, ಫೇಸ್‌ಬುಕ್ ವ್ಯಸನಿಯನ್ನಾಗಿ ಮಾಡಲು ಬಯಸುತ್ತಾರೆ. ಇದು 21ನೇ ಶತಮಾನದ ಚಟವಾಗಿದೆ. ಯುವಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಯಸುತ್ತಾರೆ. ಅಲ್ಲದೆ ಶಿಕ್ಷಣ, ಆರೋಗ್ಯ ಹಾಗೂ ಉದ್ಯೋಗ ಕ್ಷೇತ್ರಗಳ ಸಮಸ್ಯೆಗಳಿಗೆ ತಮ್ಮ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡದಿರಲು ಬಯಸುತ್ತಾರೆ' ಎಂದು ಹೇಳಿದ್ದಾರೆ. 

ಲೋಕಸಭೆಯ ವಿರೋಧ ಪಕ್ಷದ ನಾಯಕ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು "ಬಿಹಾರದಲ್ಲಿ 'ಮತ ಚೋರಿ' (ಮತ ಕಳ್ಳತನ) ನಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಮೋದಿ ಯುವಜನತೆಯನ್ನು ರೀಲ್ಸ್ ದಾಸರನ್ನಾಗಿಸಿದ್ದಾರೆ: ರಾಹುಲ್

ಕೊಯಮತ್ತೂರು ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌, ಆರೋಪಿಗಳಿಗೆ ಕಾಲಿಗೆ ಗುಂಡೇಟು

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಎಚ್‌.ವೈ.ಮೇಟಿ ವಿಧಿವಶ

ನಮ್ಮ ಮುಖ್ಯಮಂತ್ರಿಗಳು ಹೇಳಿರುವುದು ಸರಿಯಿದೆ: ಜಿ. ಪರಮೇಶ್ವರ್‌

Karnataka Today Weather: ರಾಜ್ಯದ ಈ ಭಾಗದಲ್ಲಿ ಇಂದು ಮಳೆಯಾಗಲಿದೆ

ಮುಂದಿನ ಸುದ್ದಿ
Show comments