ಮಹಾಯುತಿ ಗೆಲುವಿಗೆ ಮೋದಿ ಸಂತಸ: ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದಿದೆ ಎಂದ ಪ್ರಧಾನಿ

Sampriya
ಶನಿವಾರ, 23 ನವೆಂಬರ್ 2024 (18:22 IST)
ಮುಂಬೈ: ಮಹಾರಾಷ್ಟ್ರ ಚುನಾವಣೆಯ ಫಲಿತಾಂಶದಲ್ಲಿ ಮಹಾಯುತಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ಅಭಿವೃದ್ಧಿ ಹಾಗೂ ಉತ್ತಮ ಆಡಳಿತ ಗೆದ್ದಿದೆ. ಒಗ್ಗಟ್ಟಿನಿಂದ ನಾವು ಇನ್ನೂ ಎತ್ತರಕ್ಕೆ ಏರುತ್ತೇವೆ ಎಂದಿದ್ದಾರೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟ ಭರ್ಜರಿ ಗೆಲುವನ್ನು ಸಾಧಿಸಿದೆ. ಈ ಕುರಿತು ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಮಹಾರಾಷ್ಟ್ರ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.  

ಎನ್‌ಡಿಎಗೆ ಐತಿಹಾಸಿಕ ಗೆಲುವು ತಂದುಕೊಟ್ಟ ಮಹಾರಾಷ್ಟ್ರದ ನನ್ನ ಸಹೋದರಿಯರು, ಸಹೋದರರು ಹಾಗೂ ವಿಶೇಷವಾಗಿ ರಾಜ್ಯದ ಯುವಕರು ಮತ್ತು ಮಹಿಳೆಯರಿಗೆ ಹೃತ್ಪೂರ್ವಕ ಕೃತಜ್ಞತೆಗಳು ಎಂದು ಹೇಳಿದ್ದಾರೆ.

ನಮ್ಮ ಮೈತ್ರಿಯು ಮಹಾರಾಷ್ಟ್ರದ ಪ್ರಗತಿಗಾಗಿ ಶ್ರಮಿಸುತ್ತದೆ ಎಂದು ನಾನು ಜನರಿಗೆ ಭರವಸೆ ನೀಡುತ್ತೇನೆ. ವಿವಿಧ ಉಪಚುನಾವಣೆಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳಿಗೆ ಆಶೀರ್ವಾದ ಮಾಡಿದ್ದಕ್ಕಾಗಿ ನಾನು ವಿವಿಧ ರಾಜ್ಯಗಳ ಜನರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.

ಪ್ರತಿಯೊಬ್ಬ ಎನ್‌ಡಿಎ ಕಾರ್ಯಕರ್ತರ ಪ್ರಯತ್ನಗಳಿಗಾಗಿ ನಾನು ಹೆಮ್ಮೆಪಡುತ್ತೇನೆ. ಅವರು ಕಷ್ಟಪಟ್ಟು ಕೆಲಸ ಮಾಡಿ ಜನರ ನಡುವೆ ಹೋಗಿ ನಮ್ಮ ಉತ್ತಮ ಆಡಳಿತದ ಕಾರ್ಯಸೂಚಿಯನ್ನು ವಿವರಿಸಿದರು.  

ನಮಗೆ ಬೆಂಬಲ ನೀಡಿದ ಜಾರ್ಖಂಡ್ ಜನರಿಗೆ ನಾನು ಧನ್ಯವಾದ ಹೇಳುತ್ತೇನೆ. ಜನರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ರಾಜ್ಯಕ್ಕಾಗಿ ದುಡಿಯಲು ನಾವು ಸದಾ ಮುಂಚೂಣಿಯಲ್ಲಿರುತ್ತೇವೆ. ರಾಜ್ಯದಲ್ಲಿ ಜೆಎಂಎಂ ಅಭೂತಪೂರ್ವ ಗೆಲುವು ಸಾಧಿಸಿದೆ. ಅವರಿಗೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಡಿಕೆ ಶಿವಕುಮಾರ್ ಬೆಂಬಲಿಗರನ್ನು ತಡೆಯಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಮುಂದಿನ ಸುದ್ದಿ
Show comments