Daily Horoscope
✕

ಮನಮೋಹನ್ ಸಿಂಗ್ಗೆ ಮೋದಿ ಸೇರಿ ಗಣ್ಯರಿಂದ ಹುಟ್ಟುಹಬ್ಬದ ಶುಭಾಶಯ

Webdunia
ಭಾನುವಾರ, 26 ಸೆಪ್ಟಂಬರ್ 2021 (15:11 IST)
ನವದೆಹಲಿ : ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಜನ್ಮದಿನದ ಶುಭಾಶಯ ಕೋರಿದ್ದಾರೆ.

'ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಜನ್ಮದಿನದ ಶುಭಾಶಯಗಳು. ಅವರಿಗೆ ಭಗವಂತ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
'ಡಾ.ಮನಮೋಹನ್ ಸಿಂಗ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನರೇಗಾ, ಮಾಹಿತಿ ಹಕ್ಕಿ ಕಾಯ್ದೆ, ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್, ಶಿಕ್ಷಣ ಹಕ್ಕಿನ ಕಾಯ್ದೆ, ರಾಷ್ಟ್ರೀಯ ಸಂಸ್ಥೆಗಳಲ್ಲಿ ಮೀಸಲಾತಿ, ನಾಗರಿಕ ಪರಮಾಣು ಒಪ್ಪಂದ... ಸಿಂಗ್ ಅವರ ಅನೇಕ ಕೊಡುಗೆಗಳಲ್ಲಿ ಇವು ಕೆಲವು' ಎಂದು ಕರ್ನಾಟಕ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
'ಮಾಜಿ ಪ್ರಧಾನಿ, ದೂರದೃಷ್ಟಿಯ ಅರ್ಥಶಾಸ್ತ್ರಜ್ಞ ಮತ್ತು ಕಾಂಗ್ರೆಸ್ ನಾಯಕ ಡಾ.ಮನಮೋಹನ್ ಸಿಂಗ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಕರುಣಿಸಲಿ. ಅವರ ಚಾಣಾಕ್ಷ ನಾಯಕತ್ವ, ಸೇವೆಯಲ್ಲಿ ಸಮರ್ಪಣಾ ಮನೋಭಾವ ಮತ್ತು ಮಹಾನ್ ರಾಜನೀತಿ ಎಲ್ಲರಿಗೂ ನಿಜವಾದ ಸ್ಫೂರ್ತಿ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
'ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಜನ್ಮದಿನದ ಶುಭಾಶಯಗಳು. ದೀರ್ಘಾಯುಷ್ಯ, ಆರೋಗ್ಯಕರ ಮತ್ತು ಸಂತೋಷದ ಜೀವನ ಅವರದ್ದಾಗಲಿ ಎಂದು ಆಶಿಸುತ್ತೇನೆ. ಯುಪಿಎ ಸರ್ಕಾರ ಅವಧಿಯಲ್ಲಿ ಅವರ ನಾಯಕತ್ವಕ್ಕಾಗಿ, ಆರ್ಥಿಕತೆಯನ್ನು ದೃಢಗೊಳಿಸಿದ್ದಕ್ಕಾಗಿ, ಲಕ್ಷಾಂತರ ಜನರನ್ನು ಬಡತನದಿಂದ ಹೊರತಂದಿದ್ದಕ್ಕಾಗಿ ಮತ್ತು ರಾಷ್ಟ್ರೀಯ ಹಿತಾಸಕ್ತಿಗಾಗಿ ಅವಿಶ್ರಾಂತವಾಗಿ ಕೆಲಸ ಮಾಡಿದ್ದಕ್ಕಾಗಿ ನಾವು ಅವರಿಗೆ ಧನ್ಯವಾದ ಅರ್ಪಿಸುತ್ತೇವೆ' ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿತೀಶ್ ಸೇತು ಉದ್ಘಾಟನೆ ಮಾಡಿ ಜನರತ್ತ ಗಮ್ಚಾ ಬೀಸಿದ ಪ್ರಧಾನಿ ಮೋದಿ Video

ಕಾಂಗ್ರೆಸ್ ಕಾರ್ಯಕರ್ತರಿಗೆ ಸರಕಾರಿ ಹಣ ಹಂಚುವ ಹೀನ ಕಾರ್ಯ: ಆರ್.ಅಶೋಕ್ ಟೀಕೆ

ವಿಚ್ಛೇದನದ ಹೊಸ್ತಿಲಲ್ಲಿ ಪ್ರೀತಿಯ ಗೆಲುವು: ಸಹಿ ಹಾಕುವ ಮುನ್ನ ಪತಿಯ ಕಡೆ ನೋಡಿ ಓಡಿದ ಯುವತಿ, ವೈರಲ್ ವಿಡಿಯೋ

ಬೆಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು ಎಷ್ಟಿದೆ ಬಂಗಾರದ ಬೆಲೆ

ನಿಮ್ಮ ಮನೆ ನವೀಕರಣಕ್ಕೆ ಕೋಟಿ ಖರ್ಚು ಮಾಡ್ತೀರಿ, ಆಶಾ ಕಾರ್ಯಕರ್ತೆಯರಿಗೆ ದುಡ್ಡಿಲ್ವಾ: ಸಿಎಂ ಡಿಕೆಶಿಗೆ ಬಿಜೆಪಿ ಟಾಂಗ್ video

ಮುಂದಿನ ಸುದ್ದಿ
Show comments