Select Your Language

Notifications

webdunia
webdunia
webdunia
webdunia

ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಬೇಟಿಯಾದ ಪ್ರಧಾನಿ ಮೋದಿ

ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಬೇಟಿಯಾದ ಪ್ರಧಾನಿ ಮೋದಿ
ಚೆನ್ನೈ , ಸೋಮವಾರ, 6 ನವೆಂಬರ್ 2017 (12:36 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಒಂದು ದಿನದ ಭೇಟಿಗಾಗಿ ನಗರಕ್ಕೆ ಆಗಮಿಸಿದ್ದು, ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿಯವರನ್ನು ಭೇಟಿ ಮಾಡುವುದರೊಂದಿಗೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿಯವರನ್ನು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್, ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಸ್ವಾಗತಿಸಿದರು. ನಂತರ ಹೆಲಿಕಾಪ್ಟರ್ ಮೂಲಕ ಮದ್ರಾಸ್ ವಿಶ್ವವಿದ್ಯಾಲಯಕ್ಕೆ ತೆರಳಿ ದಿನತಂತಿ ಪತ್ರಿಕೆಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
 
ಪ್ರಧಾನಮಂತ್ರಿ ಕಚೇರಿಯಲ್ಲಿ ಹಿರಿಯ ಐಎಎಸ್ ಅಧಿಕಾರಿಯ ಪುತ್ರಿಯ ವಿವಾಹ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಹಾಜರಾಗಿದ್ದಾರೆ. ನಂತರ ಗೋಪಾಲಪುರಂನಲ್ಲಿರುವ ನಿವಾಸದಲ್ಲಿ ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿಯವರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದ್ದಾರೆ ಎಂದು ಮೂಲಗಳು ತಿಳಿಸಿದ್ದಾರೆ.  
 
ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಭಾರಿ ಹಾನಿ ಎದುರಾಗಿದ್ದು, ಕೇಂದ್ರ ಸರಕಾರದಿಂದ ಪರಿಹಾರನಿಧಿ ಬಿಡುಗಡೆ ಮಾಡುವಂತೆ ಸಿಎಂ ಎಡಪ್ಪಾಡಿ ಪಳನಿಸ್ವಾಮಿ, ಪ್ರಧಾನಿ ಮೋದಿಗೆ ಮನವಿ ಸಲ್ಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಟಿಪ್ಪು ಬದಲು ಮಿರ್ಜಾ ಇಸ್ಮಾಯಿಲ್ ಜಯಂತಿ ಮಾಡಲಿ: ಮಾಣಿಪ್ಪಾಡಿ