Webdunia - Bharat's app for daily news and videos

Install App

ವಿಶ್ವದ ಟಾಪ್ 10 ನಾಯಕರಲ್ಲಿ ಸ್ಥಾನ ಪಡೆದ ಪ್ರಧಾನಿ ಮೋದಿ : ವೆಂಕಯ್ಯನಾಯ್ಡು

Webdunia
ಶುಕ್ರವಾರ, 3 ಜೂನ್ 2016 (16:36 IST)
ಪ್ರಧಾನಿ ಮೋದಿ ಪದೇ ಪದೇ ವಿದೇಶಗಳಿಗೆ ಭೇಟಿ ನೀಡುತ್ತಿದ್ದಾರೆ ಎನ್ನುವ ಆರೋಪಗಳು ಕೀಳುಮಟ್ಟದಾಗಿವೆ. ಮೋದಿ ವಿಶ್ವದ 10 ಪ್ರಮುಖ ನಾಯಕರಲ್ಲಿ ಸ್ಥಾನಪಡೆದಿದ್ದಾರೆ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ಎಂ.ವೆಂಕಯ್ಯ ನಾಯ್ಡು ಹೇಳಿದ್ದಾರೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೆ ಬಂದ ನಂತರ ಭಾರತ ದೇಶವನ್ನು ವಿಶ್ವದಲ್ಲಿ ಗುರುತಿಸಲಾಗುತ್ತಿದೆ. ಒಂದರ ನಂತರ ಮತ್ತೊಂದು ದೇಶ, ವಿದೇಶಗಳು ಮೋದಿಯವರಿಗಾಗಿ ರೆಡ್ ಕಾರ್ಪೇಟ್ ಹಾಸುತ್ತಿವೆ ಎಂದರು. 
 
ವಿಶ್ವದ 10 ಟಾಪ್ ನಾಯಕರಲ್ಲಿ ಅವರು ಸ್ಥಾನ ಪಡೆದಿದ್ದಾರೆ. ದೇಶವನ್ನು ಅಭಿವೃದ್ಧಿಪಥದತ್ತ ಸಾಗಿಸುತ್ತಿರುವುದಕ್ಕೆ ವಿಶ್ವವೇ ಅವರನ್ನು ಹೊಗಳುತ್ತಿದೆ ಎಂದಿದ್ದಾರೆ.
 
ಬ್ರಿಕ್ಸ್ ಬ್ಯಾಂಕ್‌ನಲ್ಲಿ ಭಾರತಕ್ಕೆ ಸದಸ್ಯತ್ವ ಸ್ಥಾನ ದೊರೆತಿರುವುದು ಮತ್ತು ವಿಶ್ವಸಂಸ್ಥೆಯಿಂದ ಯೋಗಾ ದಿನಾಚರಣೆ ಆಚರಣೆಗೆ ಮುಂದಾಗಿರುವುದು ಮೋದಿ ವಿಶ್ವ ನಾಯಕ ಎನ್ನುವುದಕ್ಕೆ ಸಾಕ್ಷಿಯಾಗಿವೆ ಎಂದು ತಿಳಿಸಿದ್ದಾರೆ.
 
ಪ್ರಧಾನಿ ಮೋದಿಯವರ ವಿದೇಶ ಪ್ರವಾಸಗಳನ್ನು ವಿಪಕ್ಷಗಳು ಟೀಕಿಸುತ್ತಿರುವುದು ಕೀಳುಮಟ್ಟದ ರಾಜಕಾರಣವಾಗಿದೆ. ದೇಶದ ಅಭಿವೃದ್ಧಿಗಾಗಿ ವಿದೇಶಾಂಗ ನೀತಿಗಳಲ್ಲಿ ಬದಲಾವಣೆ ತರಲು ಪ್ರಧಾನಿ ಮೋದಿ ಪ್ರಯತ್ನಿಸುತ್ತಿದ್ದಾರೆ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ಎಂ.ವೆಂಕಯ್ಯನಾಯ್ಡು ಹೇಳಿದ್ದಾರೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments