Select Your Language

Notifications

webdunia
webdunia
webdunia
webdunia

ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿಗೆ, ವಿಜಯ್ ಘಾಟ್‌ನಲ್ಲಿ ಶಾಸ್ತ್ರಿಗೆ ಗೌರವ ನಮನ ಸಲ್ಲಿಸಿದ ಮೋದಿ

Father of the Nation Mahatma Gandhi, Former Prime Minister Lal Bahadur Shastri, Prime Minister Narendra Modi

Sampriya

ನವದೆಹಲಿ , ಗುರುವಾರ, 2 ಅಕ್ಟೋಬರ್ 2025 (09:59 IST)
Photo Credit X
ನವದೆಹಲಿ: ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು  ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ. ದೇಶದಾದ್ಯಂತ ಇಂದು ಈ ಇಬ್ಬರು ರಾಷ್ಟ್ರ ನಾಯಕ ಸ್ಮರಣೆ ಮಾಡಲಾಗುತ್ತಿದೆ. 

ಮಹಾತ್ಮ ಗಾಂಧೀಜಿ ಅವರ 156ನೇ ಜನ್ಮ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಾಜ್‌ಘಾಟ್‌ಗೆ ತೆರಳಿ ಗಾಂಧಿಗೆ ಗೌರವ ನಮನ ಸಲ್ಲಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ವಿಜಯ್ ಘಾಟ್‌ನಲ್ಲಿ ಶಾಸ್ತ್ರಿ ಅವರಿಗೆ ಗೌರವ ಸಲ್ಲಿಸಿದರು.  

ಬಾಪೂಜಿ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಗಾಂಧಿ ಜಯಂತಿಯು ಪ್ರೀತಿಯ ಬಾಪು ಅವರ ಅಸಾಧಾರಣ ಜೀವನಕ್ಕೆ ಗೌರವ ಸಲ್ಲಿಸುವ ಬಗ್ಗೆ, ಅವರ ಆದರ್ಶಗಳು ಮಾನವ ಇತಿಹಾಸದ ಹಾದಿಯನ್ನು ಪರಿವರ್ತಿಸಿದವು. ಧೈರ್ಯ ಮತ್ತು ಸರಳತೆ ಹೇಗೆ ದೊಡ್ಡ ಬದಲಾವಣೆಯ ಸಾಧನಗಳಾಗಬಹುದು ಎಂಬುದನ್ನು ಅವರು ಪ್ರದರ್ಶಿಸಿದರು ಎಂದು ಸ್ಮರಿಸಿದ್ದಾರೆ.

ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಅಸಾಧಾರಣ ರಾಜಕಾರಣಿಯಾಗಿದ್ದು, ಅವರ ಸಮಗ್ರತೆ, ನಮ್ರತೆ ಮತ್ತು ದೃಢಸಂಕಲ್ಪವು ಸವಾಲಿನ ಸಮಯದಲ್ಲೂ ಭಾರತವನ್ನು ಬಲಪಡಿಸಿತು. ‘ಜೈ ಜವಾನ್ ಜೈ ಕಿಸಾನ್’ ಎಂಬ ಅವರ ಸ್ಪಷ್ಟ ಕರೆ ನಮ್ಮ ಜನರಲ್ಲಿ ದೇಶಭಕ್ತಿಯ ಮನೋಭಾವವನ್ನು ಹುಟ್ಟುಹಾಕಿತು. ಬಲಿಷ್ಠ ಮತ್ತು ಸ್ವಾವಲಂಬಿ ಭಾರತವನ್ನು ನಿರ್ಮಿಸುವ ಪ್ರಯತ್ನದಲ್ಲಿ ಅವರು ನಮ್ಮನ್ನು ಪ್ರೇರೇಪಿಸುತ್ತಲೇ ಇದ್ದಾರೆ ಎಂದು ಕೊಂಡಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಗಾಯಕ ಜುಬೀನ್ ಗಾರ್ಗ್‌ 13ನೇ ದಿನದ ಕಾರ್ಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ