Publish Date: Thu, 18 Jan 2024 (11:35 IST)
Updated Date: Thu, 18 Jan 2024 (11:37 IST)
ಬೆಂಗಳೂರು: ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮೊದಲು ಬೆಂಗಳೂರಿಗೆ ಬರಲಿರುವ ಪ್ರಧಾನಿ ಮೋದಿ ರೋಡ್ ಶೋ ಮಾಡಲಿದ್ದಾರೆ ಎಂಬ ಸುದ್ದಿಯಿತ್ತು.
ಆದರೆ ಸಮಯದ ಅಭಾವದಿಂದ ರೋಡ್ ಶೋ ರದ್ದುಗೊಳಿಸಲಾಗಿದೆ. ನಾಳೆ ಪ್ರಧಾನಿ ಮೋದಿ ಬೆಂಗಳೂರಿಗೆ ಬರಲಿದ್ದು, ಕೇವಲ 1 ಗಂಟೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತ್ರ ಭಾಗಿಯಾಗಲಿದ್ದಾರೆ.
ದಕ್ಷಿಣ ಭಾರತದಲ್ಲಿ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಬಲಗೊಳಿಸಲು ಪ್ರಧಾನಿ ಮೋದಿ ರೋಡ್ ಶೋ ನಡೆಸಿ ಜನರನ್ನು ಸೆಳೆಯಲು ಪ್ರಯತ್ನ ನಡೆಸಿದ್ದಾರೆ. ಇದೇ ಕಾರಣಕ್ಕೆ ರೋಡ‍್ ಶೋ ನಡೆಸಲು ಸ್ವತಃ ಪ್ರಧಾನಿ ಕಾರ್ಯಾಲಯದಿಂದಲೇ ಸೂಚನೆ ಬಂದಿತ್ತು. ಆದರೆ ಈಗ ಸಮಯಾಭವವಿರುವ ಕಾರಣ ರೋಡ್ ಶೋ ರದ್ದುಗೊಳಿಸಲಾಗಿದೆ.
ನಾಳೆ ಪ್ರಧಾನಮಂತ್ರಿಗಳು ಮಧ್ಯಾಹ್ನ 2.45 ರಿಂದ 3.45 ರವರೆಗೆ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಹಾಗೂ ಬೋಯಿಂಗ್ ಸುಕನ್ಯಾ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.