Select Your Language

Notifications

webdunia
webdunia
webdunia
webdunia

ಮೋದಿ ಪ್ರಮಾಣ ವಚನ ಕಾರ್ಯಕ್ರಮದ ಹಿನ್ನಲೆ; ಇಂದು ದೆಹಲಿಗೆ ಆಗಮಿಸಲಿರುವ ಕುಮಾರಸ್ವಾಮಿ ಮೊದಲು ಯಾರನ್ನ ಭೇಟಿ ಮಾಡಲಿದ್ದಾರೆ ಗೊತ್ತಾ?

ನವದೆಹಲಿ
ನವದೆಹಲಿ , ಗುರುವಾರ, 30 ಮೇ 2019 (11:17 IST)
ನವದೆಹಲಿ : ಪ್ರಧಾನಿ ಮೋದಿ ಪ್ರಮಾಣ ವಚನ ಕಾರ್ಯಕ್ರಮದ ಹಿನ್ನಲೆ ಇಂದು ದೆಹಲಿಗೆ ಆಗಮಿಸಲಿರುವ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಮೊದಲಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.




ಇಂದು ನರೇಂದ್ರ ಮೋದಿ ಪದಗ್ರಹಣ ಸಮಾರಂಭಕ್ಕೆ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳಿಗೂ ಆಹ್ವಾನ ನೀಡಲಾಗಿದ್ದು, ಅದರಂತೆ ಸಿಎಂ ಕುಮಾರಸ್ವಾಮಿ ಅವರಿಗೂ ಆಹ್ವಾನ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಅವರು ಗುರುವಾರ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ.


ಮೋದಿ ಪದಗ್ರಹಣ ಸಮಾರಂಭಕ್ಕೂ ಮುನ್ನ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿರುವ ಸಿಎಂ ಹೆಚ್.ಡಿಕೆ ಲೋಕಸಭೆ ಚುನಾವಣೆಯಲ್ಲಿ ಸೋಲಿಗೆ ಕಾರಣ ಸೇರಿದಂತೆ ರಾಜ್ಯ ರಾಜಕೀಯದ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮೆಚ್ಚಿನ ನಾಯಿ ಜತೆ ರಾಹುಲ್ ಗಾಂಧಿ ಜಾಲಿ ರೈಡ್: ವೈರಲ್ ಆಯ್ತು ಫೋಟೋ